HomeLatest NewsBIG NEWS: ಐಪಿಎಸ್ ಅಧಿಕಾರಿ ರಾಮಚಂದ್ರ ರಾವ್ ರಾಸಲೀಲೆ ಪ್ರಕರಣ: ಶಿಸ್ತು ಕ್ರಮ ಕೈಗೊಳ್ಳುತ್ತೇವೆ: ಸಿಎಂ...

BIG NEWS: ಐಪಿಎಸ್ ಅಧಿಕಾರಿ ರಾಮಚಂದ್ರ ರಾವ್ ರಾಸಲೀಲೆ ಪ್ರಕರಣ: ಶಿಸ್ತು ಕ್ರಮ ಕೈಗೊಳ್ಳುತ್ತೇವೆ: ಸಿಎಂ ಸಿದ್ದರಾಮಯ್ಯ

ಬೆಳಗಾವಿ: ಐಪಿಎಸ್ ಅಧಿಕಾರಿ ರಾಮಚಂದ್ರ ರಾವ್ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರು ಯಾರೇ ಆಗಿರಲಿ ಅವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಬೆಳಗಾವಿ ಜಿಲ್ಲೆಯ ನಂದಗಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಐಪಿಎಸ್ ಅಧಿಕಾರಿ ರಾಮಚಂದ್ರ ರಾವ್ ರಾಸಲೀಲೆ ಪ್ರಕರಣದ ಬಗ್ಗೆ ನನಗೆ ಬೆಳಿಗ್ಗೆ ಗೊತ್ತಾಯಿತು. ಈ ಬಗ್ಗೆ ವಿಚಾರಣೆ ಮಾಡಿ ಶಿಸ್ತು ಕ್ರಮ ಕೈಗೊಳ್ಳಲಾಗುವುದು.

ಕಾನೂನಿಗಿಂತ ದೊಡ್ದವರು ಯಾರೂ ಇಲ್ಲ. ತಪ್ಪಿತಸ್ಥ ಯಾರೇ ಆಗಿರಲಿ, ಎಷ್ಟು ದೊಡ್ದ ವ್ಯಕ್ತಿಯೇ ಆಗಿರಲಿ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇನ್ನೊಂದೆಡೆ ರಾಸಲೀಲೆ ಪ್ರಕರಣದ ವಿಡಿಯೋ ವೈರಲ್ ಆಗಿತ್ತಿದ್ದಂತೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಭೇಟಿಗೆ ಬಂದ ರಾಮಚಂದ್ರ ರಾವ್ ಅವರನ್ನು ಭೇಟಿಯಾಗಲು ಗೃಹ ಸಚಿವರು ನಿರಾಕರಿಸಿದ್ದಾರೆ. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ರಾಮಚಂದ್ರ ರಾವ್, ಗೃಹ ಸಚಿವರು ಅನಾರೋಗ್ಯ ಕಾರಣಕ್ಕೆ ಭೇಟಿಯಾಗಲು ನಿರಾಕರಿಸಿದ್ದಾರೆ ಎಂದು ತಿಳಿಸಿದ್ದಾರೆ.

ರಾಸಲೀಲೆ ವಿಡಿಯೋ ವಿಚಾರವಾಗಿ, ಇದು ಹಳೆಯ ವಿಡಿಯೋ. ಹಳೇ ವಿಡಿಯೋವನ್ನು ಯಾರೋ ದುರುದ್ದೇಶ ಕಾರಣಕ್ಕೆ ವೈರಲ್ ಮಾಡಿದ್ದಾರೆ. ಇದೀ ಈಗಿನ ಘಟನೆಗಳಲ್ಲ ಎಂದು ಸಮಜಾಯಿಷಿ ನೀಡಿದ್ದಾರೆ.

ಇದು 8 ವರ್ಷದ ಹಳೇ ವಿಡಿಯೋ. ಈಗ ವೈರಲ್ ಮಾಡಿದ್ದಾರೆ. ಈ ಮೂಲಕ ನನ್ನ ವಿರುದ್ಧ ಷಡ್ಯಂತ್ರ ನಡೆಸಿದ್ದಾರೆ. ನಾನು ಬೆಳಗಾವಿಯಲ್ಲಿದ್ದಾಗಿನ ಕಚೇರಿಯ ವಿಡಿಯೋವನ್ನು ಈಗ ವೈರಲ್ ಮಾಡಲಾಗಿದೆ. ಇದು ಸುಳ್ಳು ವಿಡಿಯೋ. ನನ್ನ ವಿರುದ್ಧ ಆರೋಪ ಮಾಡಲು ಈ ರೀತಿ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

ರಾಮಚಂದ್ರ ರಾಅವ್ ಪ್ರಸ್ತುತ ಡಿಸಿಆರ್ ಇ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಅವರು ಡಿಜಿಪಿ ಆಗಿದ್ದಾಗ ಕರ್ತವ್ಯದ ವೇಳೆ ಕಚೇರಿಯಲ್ಲಿಯೇ ರಾಸಲೀಲೆಯಲ್ಲಿ ತೊಡಗಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಅಕ್ರಮ ಚಿನ್ನ ಸಾಗಾಣಿಕೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟಿ ರನ್ಯಾ ರಾವ್ ಅವರ ಮಲತಂದೆಯಾಗಿರುವ ಹಿರಿಯ ಪೊಲೀಸ್ ಅಧಿಕಾರಿ ರಾಮಚಂದ್ರ ರಾವ್ ಕಚೇರಿಯಲ್ಲಿಯೇ ಮಹಿಳೆಯರ ಜೊತೆ ಸರಸ ಸಲ್ಲಾಪದಲ್ಲಿ ತೊಡಗಿರುವ ಅಸಭ್ಯ ವಿಡಿಯೋಗಳು ವೈರಲ್ ಆಗಿದ್ದು, ಅಧಿಕಾರಿ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ನಟಿ ರನ್ಯಾರಾವ್ ಚಿನ್ನ ಕಳ್ಳ ಸಾಗಾಣೆ ಪ್ರಕರಣದಲ್ಲಿಯೂ ರಾಮಚಂದ್ರ ರಾವ್ ಹೆಸರು ತಳುಕು ಹಾಕಿಕೊಂಡಿತ್ತು.

ಈ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಅಧಿಕಾರಿಯನ್ನು ಕಡ್ಡಾಯ ರಜೆ ಮೇಲೆ ಕಳುಹಿಸಲಾಗಿತ್ತು. ಪ್ರಸ್ತುತ ರಾಮಚಂದ್ರರಾವ್ ಡಿಸಿಆರ್ ಇ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ರನ್ಯಾ ರಾವ್ ಪ್ರಕರಣಕ್ಕಿಂತಲೂ ಮೊದಲೇ ನಡೆದಿರುವ ರಾಸಲೀಲೆ ಪ್ರಕರಣ ಇದಾಗಿದ್ದು, ಕಚೇರಿಯಲ್ಲಿಯೇ, ಪೊಲೀಸ್ ಅಧಿಕಾರಿಯ ಸಮವಸ್ತ್ರದಲ್ಲಿದ್ದಾಗಲೇ ಮಹಿಳೆಯ ಜೊತೆಗೆ ಹಸಿಬಿಸಿ ದೃಶ್ಯ, ರಾಸಲೀಲೆಯಲ್ಲಿ ಮೈಮರೆತಿರುವ ವಿಡಿಯೋಗಳು ಹರಿದಾಡುತ್ತಿವೆ.

For Latest News Updates, Join Our Whatsapp Community🚩
RELATED ARTICLES

Most Popular