HomeLatest NewsBIG NEWS: ಜಿಪಂ, ತಾಪಂ, ಗ್ರಾಪಂ, ಜಿಬಿಎ ಚುನಾವಣೆ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: ಜೂನ್ ಅಂತ್ಯದೊಳಗೆ...

BIG NEWS: ಜಿಪಂ, ತಾಪಂ, ಗ್ರಾಪಂ, ಜಿಬಿಎ ಚುನಾವಣೆ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: ಜೂನ್ ಅಂತ್ಯದೊಳಗೆ ಬ್ಯಾಲೆಟ್ ಪೇಪರ್ ಮೂಲಕ ಎಲೆಕ್ಷನ್

ಬೆಂಗಳೂರು: ರಾಜ್ಯದ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ, ಗ್ರಾಮ ಪಂಚಾಯಿತಿ ಮತ್ತು ಗ್ರೇಟರ್ ಬೆಂಗಳೂರು ಪ್ರಾಧಿಕಾರದ(ಜಿಬಿಎ) 5 ನಗರ ಪಾಲಿಕೆ ಸೇರಿ ಎಲ್ಲ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಮೇ ಅಥವಾ ಜೂನ್ ಅಂತ್ಯದೊಳಗೆ ಬ್ಯಾಲೆಟ್ ಪೇಪರ್(ಮತಪತ್ರ) ಮೂಲಕ ನಡೆಸಲಾಗುವುದು.

ರಾಜ್ಯ ಚುನಾವಣಾ ಆಯೋಗದ ಆಯುಕ್ತ ಜಿ.ಎಸ್. ಸಂಗ್ರೇಶಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯ 5 ನಗರ ಪಾಲಿಕೆಯ 369 ವಾರ್ಡ್ ಗಳ ಕರಡು ಮತದಾರರ ಪಟ್ಟಿ ಪ್ರಕಟಿಸಿ ಅವರು ಮಾತನಾಡಿದರು.

ಜಿಲ್ಲಾ ಪಂಚಾಯತಿ, ತಾಲೂಕು ಪಂಚಾಯಿತಿ, ಗ್ರಾಮ ಪಂಚಾಯಿತಿ, ಸ್ಥಳೀಯ ಸಂಸ್ಥೆಗಳು ಹಾಗೂ ಜಿಬಿಎ 5 ನಗರ ಪಾಲಿಕೆ ಚುನಾವಣೆಯನ್ನು ಮತಪತ್ರದ ಮೂಲಕ ನಡೆಸಲು ತೀರ್ಮಾನಿಸಲಾಗಿದೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಜಿಬಿಎ ಕಾಯ್ದೆಯಲ್ಲಿ ಬ್ಯಾಲೆಟ್ ಪೇಪರ್ ಮೂಲಕ ಚುನಾವಣೆ ನಡೆಸಲು ಅವಕಾಶವಿದೆ. ಕಾಯ್ದೆಯಲ್ಲಿ ಅವಕಾಶ ಇರುವಾಗ ಬಳಕೆ ಮಾಡಲು ಯಾವುದೇ ಅಡ್ಡಿ ಇಲ್ಲ. ಸುಪ್ರೀಂಕೋರ್ಟ್ ನ ಯಾವುದೇ ತೀರ್ಪಿನಲ್ಲಿ ಅಥವಾ ದೇಶದ ಯಾವುದೇ ಕಾನೂನಿನಲ್ಲಿ ಬ್ಯಾಲೆಟ್ ಪೇಪರ್ ಬಳಕೆ ನಿಷೇಧಿಸಲಾಗಿದೆ ಎನ್ನುವ ಪ್ರಸ್ತಾಪ ಇಲ್ಲ. ನಿಯಮಗಳ ಚೌಕಟ್ಟಿನಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular