HomeLatest NewsBREAKING: ಚಿಕ್ಕಬಳ್ಳಾಪುರ ಬಳಿ ಭೀಕರ ಅಪಘಾತ: ಟ್ರಕ್ ಗೆ ಸ್ಲೀಪರ್ ಬಸ್ ಡಿಕ್ಕಿಯಾಗಿ 11 ಪ್ರಯಾಣಿಕರಿಗೆ...

BREAKING: ಚಿಕ್ಕಬಳ್ಳಾಪುರ ಬಳಿ ಭೀಕರ ಅಪಘಾತ: ಟ್ರಕ್ ಗೆ ಸ್ಲೀಪರ್ ಬಸ್ ಡಿಕ್ಕಿಯಾಗಿ 11 ಪ್ರಯಾಣಿಕರಿಗೆ ಗಾಯ

ಚಿಕ್ಕಬಳ್ಳಾಪುರ: ಮಂತ್ರಾಲಯಕ್ಕೆ ತೆರಳುತ್ತಿದ್ದ ಖಾಸಗಿ ಸ್ಲೀಪರ್ ಬಸ್ ಅಪಘಾತಕ್ಕೀಡಾಗಿದೆ. ಟ್ರಕ್ ಗೆ ಖಾಸಗಿ ಸ್ಲೀಪರ್ ಬಸ್ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.

ಚಿಕ್ಕಬಳ್ಳಾಪುರದ ಅಗಲಗುರ್ಕಿ ಸಮೀಪ ಘಟನೆ ನಡೆದಿದ್ದು, ಅಪಘಾತದಲ್ಲಿ 11 ಪ್ರಯಾಣಿಕರು ಗಾಯಗೊಂಡಿದ್ದಾರೆ. ಬಸ್ ಕ್ಲೀನರ್ ಸೇರಿ ಇಬ್ಬರಿಗೆ ಗಂಭೀರವಾದ ಗಾಯಗಳಾಗಿವೆ. ಬಸ್ ಮೈಸೂರಿನಿಂದ ಬೆಂಗಳೂರು ಮಾರ್ಗವಾಗಿ ಮಂತ್ರಾಲಯಕ್ಕೆ ತೆರಳುತ್ತಿತ್ತು. ಗಾಯಾಳುಗಳನ್ನು ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಸುಗಮ ಸಂಸ್ಥೆಯ ಬಸ್ ಇದಾಗಿದೆ. ಬೆಂಗಳೂರು-ಹೈದರಾಬಾದ್ ಹೆದ್ದಾರಿಯಲ್ಲಿ ಟ್ರಕ್ ಗೆ ಡಿಕ್ಕಿ ಹೊಡೆದ ರಭಸಕ್ಕೆ ಬಸ್ ಮುಂಭಾಗ ಸಂಪೂರ್ಣ ನಜ್ಜು ಗುಜ್ಜಾಗಿದೆ. ಬಸ್ ಚಾಲಕ ಪಾರಾಗಿದ್ದಾರೆ. ಹೊರ ಬರಲಾಗದೇ ಸಿಲುಕಿದ್ದ ಓರ್ವ ಪ್ರಯಾಣಿಕನ್ನು ರಕ್ಷಿಸಲಾಗಿದೆ. ಸ್ಥಳಕ್ಕೆ ಎಸ್ಪಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular