ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು 1.73 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿದ್ದಾರೆ.
ಮಲೇಷ್ಯಾದ ಕೌಲಲಾಂಪುರದಿಂದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಯಾಣಿಕನನ್ನು ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ. ಬಂಧಿತನಿಂದ 1.73 ಕೋಟಿ ರೂ. ಮೌಲ್ಯದ 4.96 ಕೆಜಿ ಗಾಂಜಾ ಜಪ್ತಿ ಮಾಡಲಾಗಿದೆ. ಪ್ರಯಾಣಿಕರ ಸೋಗಿನಲ್ಲಿ ಬಂದಿಳಿದ ಆತ ವಿಮಾನ ನಿಲ್ದಾಣದಿಂದ ಹೊರ ಹೋಗುವಾಗ ಅನುಮಾನದ ಮೇಲೆ ಕಸ್ಟಮ್ಸ್ ಅಧಿಕಾರಿಗಳು ತಡೆದು ಬ್ಯಾಗ್ ಪರಿಶೀಲಿಸಿದ್ದಾರೆ. ಬ್ಯಾಗ್ ನಲ್ಲಿ 4.96 ಕೆಜಿ ಗಾಂಜಾ ಪತ್ತೆಯಾಗಿದೆ. ಎನ್.ಡಿ.ಪಿ.ಎಸ್. ಕಾಯ್ದೆಯಡಿ ಆತನನ್ನು ಬಂಧಿಸಲಾಗಿದೆ.

