HomeLatest Newsಜ. 27ರಂದು ದೇಶಾದ್ಯಂತ ಬ್ಯಾಂಕ್ ನೌಕರರ ಮುಷ್ಕರ: ಸತತ 4 ದಿನ ರಜೆ, ಕೆಲ ಸೇವೆಗಳಲ್ಲಿ...

ಜ. 27ರಂದು ದೇಶಾದ್ಯಂತ ಬ್ಯಾಂಕ್ ನೌಕರರ ಮುಷ್ಕರ: ಸತತ 4 ದಿನ ರಜೆ, ಕೆಲ ಸೇವೆಗಳಲ್ಲಿ ವ್ಯತ್ಯಯ ಸಾಧ್ಯತೆ

ನವದೆಹಲಿ: ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬ್ಯಾಂಕ್ ನೌಕರರು ಜನವರಿ 27ರಂದು ದೇಶಾದ್ಯಂತ ಮುಷ್ಕರಕ್ಕೆ ಕರೆ ನೀಡಿದ್ದಾರೆ.

ವಾರದಲ್ಲಿ ಐದು ದಿನ ಕೆಲಸದ ಅವಧಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬ್ಯಾಂಕ್ ನೌಕರರು ಮುಷ್ಕರ ಕೈಗೊಂಡಿದ್ದಾರೆ. ವಾರಾಂತ್ಯ ಮತ್ತು ಗಣರಾಜ್ಯೋತ್ಸವ ರಜೆಗಳ ಮರುದಿನವೇ ಮುಷ್ಕರ ಕೈಗೊಂಡ ಹಿನ್ನೆಲೆಯಲ್ಲಿ ಸತತ ನಾಲ್ಕು ದಿನಗಳ ಕಾಲ ಬ್ಯಾಂಕುಗಳು ಬಂದ್ ಆಗಲಿವೆ. ಹೀಗಾಗಿ ಹಲವು ಬ್ಯಾಂಕ್ ಸೇವೆಗಳಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದೆ.

ಜನವರಿ 24ರಂದು 4ನೇ ಶನಿವಾರ, ಜನವರಿ 25ರಂದು ಭಾನುವಾರ, ಜನವರಿ 26ರಂದು ಸೋಮವಾರ ಗಣರಾಜ್ಯೋತ್ಸವ ಅಂಗವಾಗಿ ಬ್ಯಾಂಕುಗಳಿಗೆ ಸಾರ್ವತ್ರಿಕ ರಜೆ ಇರುತ್ತದೆ. ಜನವರಿ 27ರಂದು ಮಂಗಳವಾರ ಮುಷ್ಕರ ಕೈಗೊಂಡಿರುವ ಹಿನ್ನೆಲೆಯಲ್ಲಿ ಬ್ಯಾಂಕ್ ಕೆಲಸ ಸ್ಥಗಿತವಾಗಲಿದೆ. ಹಣ ವಿತ್ ಡ್ರಾ, ಚೆಕ್ ಕ್ಲಿಯರೆನ್ಸ್, ಡಿಡಿ ಇತರ ಬ್ಯಾಂಕ್ ಶಾಖೆಯಲ್ಲಿ ದೊರೆಯುವ ಸೇವೆಗಳಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದೆ. ಗ್ರಾಹಕರು ತಮ್ಮ ವ್ಯವಹಾರಗಳ ಬಗ್ಗೆ ಮೊದಲೇ ಪ್ಲಾನ್ ಮಾಡಿಕೊಳ್ಳುವುದು ಒಳ್ಳೆಯದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular