ಮೈಸೂರು: ಮೈಸೂರಿನಲ್ಲಿ ಚಾಕುವಿನಿಂದ ಇರಿದು ಯುವಕನನ್ನು ಕೊಲೆ ಮಾಡಲಾಗಿದೆ. ಉದಯಗಿರಿಯ ಬೀಡಿ ಕಾಲೋನಿಯ ಬಳಿ ಘಟನೆ ನಡೆದಿದೆ.
ಶಹಬಾಜ್(26) ಕೊಲೆಯಾದ ಯುವಕ ಎಂದು ಹೇಳಲಾಗಿದೆ. ಸಣ್ಣಪುಟ್ಟ ವಿಚಾರಕ್ಕೆ ಗಲಾಟೆಯಾಗಿ ಶಹಬಾಜ್ ಕೊಲೆ ಮಾಡಲಾಗಿದೆ. ಸ್ನೇಹಿತರ ಜೊತೆ ಸೇರಿ ಕೊಲೆ ಮಾಡಿರುವ ಮಾಹಿತಿ ಗೊತ್ತಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

