HomeKarnatakaಪ್ರಿಪರೇಟರಿ ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದಿದ್ದಕ್ಕೆ ವಿದ್ಯಾರ್ಥಿನಿ ಆತ್ಮಹತ್ಯೆ

ಪ್ರಿಪರೇಟರಿ ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದಿದ್ದಕ್ಕೆ ವಿದ್ಯಾರ್ಥಿನಿ ಆತ್ಮಹತ್ಯೆ

ಚಿಕ್ಕಮಗಳೂರು: ಪ್ರಿಪರೇಟರಿ ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದಿದ್ದಕ್ಕೆ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಪ್ಪ ತಾಲೂಕಿನ ಕೊಳೆಹಲಸು ಗ್ರಾಮದಲ್ಲಿ ನಡೆದಿದೆ.

ಪ್ರಕೃತಿ(16) ಮೃತಪಟ್ಟ ವಿದ್ಯಾರ್ಥಿನಿ. ಕೆಪಿಎಸ್ ಪ್ರೌಢಶಾಲೆಯಲ್ಲಿ 10ನೇ ತರಗತಿ ಓದುತ್ತಿದ್ದ ಪ್ರಕೃತಿ ಪ್ರಿಪರೇಟರಿ ಪರೀಕ್ಷೆಯಲ್ಲಿ ಮೂರು ವಿಷಯದಲ್ಲಿ ಕಡಿಮೆ ಅಂಕ ಗಳಿಸಿದ್ದರು. ಇದರಿಂದ ಮನನೊಂದ ಅವರು ಮನೆಯಲ್ಲಿದ್ದ ಕ್ರಿಮಿನಾಶಕ ಸೇವಿಸಿದ್ದಾರೆ. ನಂತರ ಅವರನ್ನು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಹರಿಹರಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular