HomeLatest News'ರಾಜ್ಯ ಸರ್ಕಾರಿ' ನೌಕರರು ಚುನಾವಣೆ, ರಾಜಕೀಯದಲ್ಲಿ ಭಾಗವಹಿಸಬಹುದಾ ? ರೂಲ್ಸ್ ತಿಳಿಯಿರಿ

‘ರಾಜ್ಯ ಸರ್ಕಾರಿ’ ನೌಕರರು ಚುನಾವಣೆ, ರಾಜಕೀಯದಲ್ಲಿ ಭಾಗವಹಿಸಬಹುದಾ ? ರೂಲ್ಸ್ ತಿಳಿಯಿರಿ

ಬೆಂಗಳೂರು :   ರಾಜ್ಯ ಸರ್ಕಾರಿ ನೌಕರರು ರಾಜಕೀಯದಲ್ಲಿ ಭಾಗವಹಿಸಬಹುದಾ ? ಭಾಗವಹಿಸಿದ್ರೆ ಅದು ತಪ್ಪಾ..? ರೂಲ್ಸ್ ಏನು ಹೇಳುತ್ತದೆ…ಇಲ್ಲಿದೆ ಮಾಹಿತಿ. ಯಾರೇ ಸರ್ಕಾರಿ ನೌಕರನು, ಯಾವುದೇ ರಾಜಕೀಯ ಪಕ್ಷದ ಅಥವಾ ರಾಜಕಾರಣದಲ್ಲಿ ಭಾಗವಹಿಸುವಂಥ ಯಾವುದೇ ಸಂಘ ಸಂಸ್ಥೆಯ ಸದಸ್ಯನಾಗಿರತಕ್ಕದ್ದಲ್ಲ ಅಥವಾ ಅವುಗಳೊಂದಿಗೆ ಅನ್ಯಥಾ ಸಂಬಂಧ ಹೊಂದಿರತಕ್ಕದ್ದಲ್ಲ ಅಥವಾ ಯಾವುದೇ ರಾಜಕೀಯ ಚಳುವಳಿ ಅಥವಾ ಚಟುವಟಿಕೆಯಲ್ಲಿ ಭಾಗವಹಿಸತಕ್ಕದ್ದಲ್ಲ ಎಂಬ ನಿಯಮವಿದೆ.

ಸರ್ಕಾರಿ ನೌಕರನು ರಾಜಕೀಯದಲ್ಲಿ ಮತ್ತುಚುನಾವಣೆಯಲ್ಲಿ ಭಾಗವಹಿಸುವುದು ತಪ್ಪಾ…?

(1) ಯಾರೇ ಸರ್ಕಾರಿ ನೌಕರನು, ಯಾವುದೇ

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜಕೀಯ ಪಕ್ಷದ ಅಥವಾ ರಾಜಕಾರಣದಲ್ಲಿ ಭಾಗವಹಿಸುವಂಥ ಯಾವುದೇ ಸಂಘ ಸಂಸ್ಥೆಯ ಸದಸ್ಯನಾಗಿರತಕ್ಕದ್ದಲ್ಲ ಅಥವಾ ಅವುಗಳೊಂದಿಗೆ ಅನ್ಯಥಾ ಸಂಬಂಧ ಹೊಂದಿರತಕ್ಕದ್ದಲ್ಲ ಅಥವಾ ಯಾವುದೇ ರಾಜಕೀಯ ಚಳುವಳಿ ಅಥವಾ ಚಟುವಟಿಕೆಯಲ್ಲಿ ಭಾಗವಹಿಸತಕ್ಕದ್ದಲ್ಲ, ಅದರ ಸಹಾಯಾರ್ಥ ವಂತಿಗೆ ನೀಡತಕ್ಕದ್ದಲ್ಲ ಅಥವಾ ಅದಕ್ಕೆ ಯಾವುದೇ ರೀತಿಯ ನೆರವು ನೀಡತಕ್ಕದ್ದಲ್ಲ.

ಕಾನೂನಿನ ಮೂಲಕ ಸ್ಥಾಪಿತವಾದ ಸರ್ಕಾರವನ್ನು ಪ್ರತ್ಯಕ್ಷವಾಗಿ ಅಥವಾ ಪರೋಕ್ಷವಾಗಿ ಉರುಳಿಸುವಂಥದ್ದಾಗಿರುವ ಅಥವಾ ಉರುಳಿಸುವ ಉದ್ದೇಶ ಹೊಂದಿರುವ ಯಾವುದೇ ಚಳುವಳಿಯಲ್ಲಿ ಅಥವಾ ಚಟುವಟಿಕೆಯಲ್ಲಿ ಅವನ ಕುಟುಂಬದ ಯಾರೇ ಸದಸ್ಯನೂ ಭಾಗವಹಿಸದಂತೆ, ಅದರ ಸಹಾಯಾರ್ಥ ವಂತಿಗೆ ನೀಡದಂತೆ ಅಥವಾ ಇನ್ನಾವುದೇ ರೀತಿಯಿಂದ ನೆರವಾಗುವುದನ್ನು ತಡೆಗಟ್ಟಲು ಪ್ರಯತ್ನಿಸುವುದು ಪ್ರತಿಯೊಬ್ಬ ಸರ್ಕಾರಿ ನೌಕರನ ಕರ್ತವ್ಯವಾಗಿರತಕ್ಕದ್ದು ಮತ್ತು ಅಂಥ ಯಾವುದೇ ಚಳುವಳಿಯಲ್ಲಿ ಅಥವಾ ಚಟುವಟಿಕೆಯಲ್ಲಿ ಅವನ ಕುಟುಂಬದ ಸದಸ್ಯರು ಭಾಗವಹಿಸುವುದನ್ನು, ವಂತಿಗೆ ನೀಡುವುದನ್ನು ಅಥವಾ ಬೇರೆ ರೀತಿಯಿಂದ ನೆರವು ನೀಡುವುದನ್ನು ತಡೆಗಟ್ಟಲು ಸರ್ಕಾರಿ ನೌಕರನಿಗೆ ಸಾಧ್ಯವಾಗದಿದ್ದರೆ, ಅವನು ಆ ವಿಷಯವನ್ನು ಸರ್ಕಾರಕ್ಕೆ ವರದಿ ಮಾಡತಕ್ಕದ್ದು.

(3)ಯಾವುದೇ ಒಂದು ಪಕ್ಷವು ರಾಜಕೀಯ ಪಕ್ಷವೇ ಅಥವಾ ಯಾವುದೇ ಸಂಘಸಂಸ್ಥೆಯು ರಾಜಕೀಯದಲ್ಲಿ ಭಾಗವಹಿಸುತ್ತಿದೆಯೇ ಅಥವಾ ಯಾವುದೇ ಚಳವಳಿಯು ಅಥವಾ ಚಟುವಟಿಕೆಯು (2)ನೇ ಉಪನಿಯಮದ ವ್ಯಾಪ್ತಿಯೊಳಗೆ ಬರುತ್ತದೆಯೇ ಎಂಬ ಯಾವುದೇ ಪ್ರಶ್ನೆ ಉದ್ಭವಿಸಿದಾಗ, ಆ ಕುರಿತು ಸರ್ಕಾರದ ತೀರ್ಮಾನವೇ ಅಂತಿಮವಾಗಿರತಕ್ಕದ್ದು.

(4) ಯಾರೇ ಸರ್ಕಾರಿ ನೌಕರನು ಯಾವುದೇ ವಿಧಾನಮಂಡಲದ ಅಥವಾ ಸ್ಥಳೀಯ ಪ್ರಾಧಿಕಾರದ ಚುನಾವಣಾ ಪ್ರಚಾರ ಮಾಡತಕ್ಕದ್ದಲ್ಲ ಅಥವಾ ಅನ್ಯಥಾ ಹಸ್ತಕ್ಷೇಪ ಮಾಡತಕ್ಕದ್ದಲ್ಲ ಅಥವಾ ಆ ಸಂಬಂಧದಲ್ಲಿ ತನ್ನ ಪ್ರಭಾವವನ್ನು ಬೀರತಕ್ಕದ್ದಲ್ಲ ಅಥವಾ ಅದರಲ್ಲಿ ಭಾಗವಹಿಸತಕ್ಕದ್ದಲ್ಲ:

ಪರಂತು,

(i) ಅಂಥ ಚುನಾವಣೆಯಲ್ಲಿ ತನ್ನ ಮತವನ್ನು ಚಲಾಯಿಸಲು ಅರ್ಹನಾಗಿರುವ ಸರ್ಕಾರಿ ನೌಕರನು ಮತ ಹಾಕಲು ತನಗಿರುವ ಹಕ್ಕನ್ನು ಚಲಾಯಿಸಬಹುದು, ಆದರೆ ಆತನು ಹಾಗೆ ಮಾಡುವಾಗ, ತಾನು ಮತ ಹಾಕಲು ಉದ್ದೇಶಿಸಿರುವ ರೀತಿ ಅಥವಾ ಮತ ಹಾಕಿದ ರೀತಿಯ ಬಗ್ಗೆ ಯಾವುದೇ ಸೂಚನೆಯನ್ನು ನೀಡತಕ್ಕದ್ದಲ್ಲ.

(ii) ಚುನಾವಣೆ ನಡೆಯುವಾಗ, ಸರ್ಕಾರಿ ನೌಕರನು ತತ್ಕಾಲದಲ್ಲಿ ಜಾರಿಯಲ್ಲಿರುವ ಯಾವುದೇ ಕಾನೂನಿನ ಮೂಲಕ ಅಥವಾ ಕಾನೂನಿನ ಮೇರೆಗೆ, ಆತನ ಮೇಲೆ ವಿಧಿಸಲಾಗಿರುವ ಕರ್ತವ್ಯದ ಯುಕ್ತ ನಿರ್ವಹಣೆಯಲ್ಲಿ, ಆತನು ನೆರವು ನೀಡುತ್ತಾನೆಂಬ ಏಕೈಕ ಕಾರಣಕ್ಕಾಗಿ ಈ ಉಪನಿಯಮದ ಉಪಬಂಧಗಳನ್ನು ಉಲ್ಲಂಘಿಸಿರುವನೆಂದು ಭಾವಿಸತಕ್ಕದ್ದಲ್ಲ.

ವಿವರಣೆ:- ಸರ್ಕಾರಿ ನೌಕರನು ಯಾವುದೇ ಚುನಾವಣಾ ಚಿಹ್ನೆಯನ್ನು ತನ್ನ ಶರೀರದ, ವಾಹನದ ಅಥವಾ ನಿವಾಸದ ಮೇಲೆ ಪ್ರದರ್ಶಿಸಿದರೆ, ಅವನು, ಈ ಉಪ-ನಿಯಮದ ಅರ್ಥವ್ಯಾಪ್ತಿಯೊಳಗೆ ಚುನಾವಣೆಗೆ ಸಂಬಂಧಿಸಿದಂತೆ ತನ್ನ ಪ್ರಭಾವವನ್ನು ಬೀರುತ್ತಿದ್ದಾನೆ ಎಂದು ಪರಿಗಣಿಸತಕ್ಕದ್ದು.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular