HomeKarnatakaಪಿಯುಸಿ, ಐಟಿಐ, ಪದವಿ ಇತರೆ ವಿದ್ಯಾರ್ಹತೆ ಹೊಂದಿದವರಿಗೆ ಗುಡ್ ನ್ಯೂಸ್

ಪಿಯುಸಿ, ಐಟಿಐ, ಪದವಿ ಇತರೆ ವಿದ್ಯಾರ್ಹತೆ ಹೊಂದಿದವರಿಗೆ ಗುಡ್ ನ್ಯೂಸ್

ಕೊಪ್ಪಳ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ  ಜನವರಿ 23 ರಂದು ಬೆಳಿಗ್ಗೆ 10 ಗಂಟೆಯಿAದ ಮಧ್ಯಾಹ್ನ 1.30ರ ವರೆಗೆ ವಾಕ್ ಇನ್ ಇಂಟರ್‌ವ್ಯೂವ್ ಅನ್ನು ಆಯೋಜಿಸಲಾಗಿದೆ.

ಪಿ.ಯು.ಸಿ., ಐಟಿಐ(ಯಾವುದೇ ವೃತ್ತಿ), ಡಿಪ್ಲೊಮಾ ಮೆಕ್ಯಾನಿಕಲ್, ಡಿಪ್ಲೊಮಾ ಎಲೆಕ್ಟ್ರಿಕಲ್, ಇತರೆ ಪದವಿ ವಿದ್ಯಾರ್ಹತೆ ಹೊಂದಿದ 18 ರಿಂದ 30 ವರ್ಷದೊಳಗಿನ ನಿರುದ್ಯೋಗಿ ಪುರಷರು ದೃಢೀಕರಿಸಲಾದ ತಮ್ಮ ವಿದ್ಯಾರ್ಹತೆಯ ಎಲ್ಲ ಪ್ರಮಾಣ ಪತ್ರಗಳ 3 ಪ್ರತಿಗಳೊಂದಿಗೆ ಮತ್ತು ಆಧಾರ್ ಕಾರ್ಡಿನ ಪ್ರತಿ, ಬಯೋಡೇಟಾ(ರೆಸ್ಯುಮ್) ಹಾಗೂ ಪಾಸ್‌ಪೋರ್ಟ್ ಅಳತೆಯ 2 ಭಾವಚಿತ್ರಗಳೊಂದಿಗೆ ಈ ವಾಕ್ ಇನ್ ಇಂಟರ್‌ವ್ಯೂವ್‌ ನಲ್ಲಿ ಭಾಗವಹಿಸಿ ಉದ್ಯೋಗದ ನೆರವನ್ನು ಪಡೆಯಬಹುದಾಗಿದೆ. ಉದ್ಯೋಗಾಕಾಂಕ್ಷಿಗಳು https://forms.gle/JUms1oPocRNQufRo7 ಮೂಲಕ ನೋಂದಣಿ ಮಾಡಿಕೊಳ್ಳಬಹುದು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಜಿಲ್ಲಾ ಆಡಳಿತ ಭವನ, ಮೊದಲನೇ ಮಹಡಿ, ಕೊಪ್ಪಳ ಇವರನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular