HomeLatest Newsಬೆಳಗಾವಿ ಗಡಿ ವಿವಾದ: ಸುಪ್ರೀಂ ಕೋರ್ಟ್ ನಲ್ಲಿ ಇಂದು ಮಹಾರಾಷ್ಟ್ರ ಅರ್ಜಿ ವಿಚಾರಣೆ

ಬೆಳಗಾವಿ ಗಡಿ ವಿವಾದ: ಸುಪ್ರೀಂ ಕೋರ್ಟ್ ನಲ್ಲಿ ಇಂದು ಮಹಾರಾಷ್ಟ್ರ ಅರ್ಜಿ ವಿಚಾರಣೆ

ಬೆಳಗಾವಿ: ಕರ್ನಾಟಕ, ಮಹಾರಾಷ್ಟ್ರ ಗಡಿ ವಿವಾದಕ್ಕೆ ಸಂಬಂಧಿಸಿದಂತೆ 22 ವರ್ಷಗಳ ಹಿಂದೆ ಮಹಾರಾಷ್ಟ್ರ ಸರ್ಕಾರ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಬುಧವಾರ ಸುಪ್ರೀಂಕೋರ್ಟ್ ನಲ್ಲಿ ನಡೆಯಲಿದೆ.

ಬೆಳಗಾವಿ ಸೇರಿದಂತೆ ಕರ್ನಾಟಕದಲ್ಲಿರುವ 865 ನಗರ, ಪಟ್ಟಣ, ಗ್ರಾಮಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಬೇಕು ಎನ್ನುವ ಮಹಾರಾಷ್ಟ್ರ ಸರ್ಕಾರದ ಅರ್ಜಿಯನ್ನು ವಿಚಾರಣೆಗೆ ಅಂಗೀಕರಿಸಬೇಕೇ ಅಥವಾ ತಿರಸ್ಕರಿಸಬೇಕೆ ಎನ್ನುವ ಬಗ್ಗೆ ಸುಪ್ರೀಂ ಕೋರ್ಟ್ ನಿಂದ ಮಹತ್ವದ ನಿರ್ಣಯ ಹೊರಬೀಳುವ ಸಾಧ್ಯತೆ ಇದೆ. ಕರ್ನಾಟಕ ಸರ್ಕಾರದ ಪರವಾಗಿ ಹಿರಿಯ ನ್ಯಾಯವಾದಿ ನಿಶಾಂತ್ ಪಾಟೀಲ್ ವಕಾಲತ್ತು ವಹಿಸಿದ್ದಾರೆ.

2004ರಲ್ಲಿ ಮಹಾರಾಷ್ಟ್ರ ಸುಪ್ರೀಂ ಕೋರ್ಟ್ ಗೆ ಗಡಿ ವಿವಾದ ಬಗ್ಗೆ ಅರ್ಜಿ ಸಲ್ಲಿಸಿದೆ. ಇದಕ್ಕೆ ಕರ್ನಾಟಕ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಒಂದು ವೇಳೆ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿಯನ್ನು ವಿಚಾರಣೆಗೆ ಅಂಗೀಕರಿಸಿದರೆ ಎರಡು ರಾಜ್ಯಗಳ ವಾದ, ಪ್ರತಿವಾದಕ್ಕೆ ಚಾಲನೆ ಸಿಗಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular