HomeLatest Newsರಾಜ್ಯಕ್ಕೆ ಇಂದು ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಭೇಟಿ

ರಾಜ್ಯಕ್ಕೆ ಇಂದು ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಭೇಟಿ

ಬೆಂಗಳೂರು: ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಇಂದು ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಅವರು ಬೆಂಗಳೂರು, ತುಮಕೂರಿಗೆ ಭೇಟಿ ನೀಡಲಿದ್ದು, ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.

ತುಮಕೂರಿನ ಸಿದ್ಧಗಂಗಾ ಮಠದ ಕಾರ್ಯಕ್ರಮದಲ್ಲಿ ರಾಧಾಕೃಷ್ಣನ್ ಭಾಗವಹಿಸಲಿದ್ದಾರೆ. ಸಿದ್ಧಗಂಗಾ ಮಠದಲ್ಲಿ ಶಿವಕುಮಾರ ಶ್ರೀಗಳ ಏಳನೇ ಪುಣ್ಯ ಸ್ಮರಣೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಬೆಳಗ್ಗೆ 11 ಗಂಟೆಗೆ ವೇದಿಕೆ ಕಾರ್ಯಕ್ರಮ ನಡೆಯಲಿದೆ. 10.50ಕ್ಕೆ ಶ್ರೀಮಠಕ್ಕೆ ಆಗಮಿಸುವ ಉಪರಾಷ್ಟ್ರಪತಿಗಳು ಮೊದಲಿಗೆ ಶ್ರೀ ಶಿವಕುಮಾರ ಸ್ವಾಮಿಗಳ ಗದ್ದುಗೆಗೆ ಪೂಜೆ ಸಲ್ಲಿಸಲಿದ್ದಾರೆ.

ನಂತರ ಅವರು ಬೆಂಗಳೂರಿನಲ್ಲಿ ಸಿಎಂಆರ್ ತಾಂತ್ರಿಕ ಸಂಸ್ಥೆಯ ಬೆಳ್ಳಿ ಹಬ್ಬದ ಕಾರ್ಯಕ್ರಮದಲ್ಲಿ ಭಾಗವಹಿಸುವರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular