HomeLatest NewsBIG NEWS: ಶೇ. 50ರಷ್ಟು ಮೀಸಲಾತಿಯನ್ವಯ ನೇಮಕಾತಿ ಮುಂದುವರೆಸಲು ಹೈಕೋರ್ಟ್ ಒಪ್ಪಿಗೆ

BIG NEWS: ಶೇ. 50ರಷ್ಟು ಮೀಸಲಾತಿಯನ್ವಯ ನೇಮಕಾತಿ ಮುಂದುವರೆಸಲು ಹೈಕೋರ್ಟ್ ಒಪ್ಪಿಗೆ

ಬೆಂಗಳೂರು: ಚಾಲ್ತಿಯಲ್ಲಿರುವ ಶೇಕಡ 50ರ ಮೀಸಲಾತಿ ಅನ್ವಯ ಸರ್ಕಾರಿ ಹುದ್ದೆಗಳ ನೇಮಕಾತಿ ನಡೆಸುವ ವಿಚಾರದಲ್ಲಿ ಮಧ್ಯ ಪ್ರವೇಶಿಸುವುದಿಲ್ಲ. ಮೀಸಲಾತಿ ಹೆಚ್ಚಿಸಿರುವುದರ ಅನುಸಾರ ಹೊಸದಾಗಿ ಅಧಿಸೂಚನೆ ಹೊರಡಿಸಕೂಡದು ಎಂದು ಹೈಕೋರ್ಟ್ ಪುನರುಚ್ಚರಿಸಿದೆ.

ರಾಜ್ಯದಲ್ಲಿ ಸರ್ಕಾರಿ ಹುದ್ದೆಗಳ ನೇಮಕಾತಿಯಲ್ಲಿ ಶೇಕಡ 50ರಷ್ಟು ಮೀಸಲಾತಿಯಲ್ಲಿ ನೇಮಕಾತಿ ಮುಂದುವರಿಸಿ ಆದೇಶಗಳನ್ನು ವಿತರಿಸಲು ಅವಕಾಶ ಕಲ್ಪಿಸಲು ಅನುಮತಿ ಕೋರಿ ಸೂಕ್ತ ಅರ್ಜಿ ಸಲ್ಲಿಸಲು ಸರ್ಕಾರಕ್ಕೆ ಹೈಕೋರ್ಟ್ ಅವಕಾಶ ಕಲ್ಪಿಸಿದೆ.

ಸರ್ಕಾರಿ ಹುದ್ದೆಗಳ ನೇಮಕಾತಿಯಲ್ಲಿ ಪರಿಶಿಷ್ಟ ಜಾತಿಗೆ ಇದ್ದ ಮೀಸಲಾತಿ ಪ್ರಮಾಣವನ್ನು 15 ರಿಂದ 17ಕ್ಕೆ, ಪರಿಶಿಷ್ಟ ಪಂಗಡದ ಮೀಸಲಾತಿಯನ್ನು ಶೇಕಡ 3ರಿಂದ 7ರವರೆಗೂ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಕರ್ನಾಟಕ ಪರಿಶಿಷ್ಟ ಜಾತಿಗಳು ಮತ್ತು ಪರಿಶಿಷ್ಟ ಪಂಗಡಗಳ(ಶೈಕ್ಷಣಿಕ ಸಂಸ್ಥೆಗಳಲ್ಲಿನ ಸ್ಥಾನಗಳಲ್ಲಿ ಮತ್ತು ರಾಜ್ಯಾಧೀನ ಸೇವೆಗಳಲ್ಲಿ ನೇಮಕಾತಿ ಅಥವಾ ಹುದ್ದೆಗಳಲ್ಲಿ ಮೀಸಲಾತಿ ಕಾಯ್ದೆ 2022 ಜಾರಿಗೊಳಿಸಿದ್ದು. ಈ ಕಾಯ್ದೆ ಸಂವಿಧಾನ ಬಾಹಿರವಾಗಿದೆ. ಎಂದು ಆಕ್ಷೇಪಿಸಿ ಡಾ. ಅಂಬೇಡ್ಕರ್ ಪರಿಶಿಷ್ಟ ಜಾತಿಗಳ ಒಕ್ಕೂಟದ ರಾಜ್ಯ ಘಟಕದ ಅಧ್ಯಕ್ಷ ಮಹೇಂದ್ರ ಕುಮಾರ್ ಮಿತ್ರ ಇತರರು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ನೇತೃತ್ವದ ವಿಭಾಗೀಯ ಪೀಠದ ಮುಂದೆ ಮಂಗಳವಾರ ವಿಚಾರಣೆ ನಡೆದಿದೆ. ಸರ್ಕಾರದ ಪರ ಅಡ್ವೋಕೇಟ್ ಜನರಲ್ ಅವರು ಶೇಕಡ 50ರ ಮೀಸಲಾತಿ ಆಧರಿಸಿ ಹಲವು ಸರ್ಕಾರಿ ಹುದ್ದೆಗಳ ನೇಮಕಾತಿಗೆ ಸರ್ಕಾರ ಅಧಿಸೂಚನೆ ಹೊರಡಿಸಿದೆ. ನೇಮಕಾತಿ ಪ್ರಕ್ರಿಯೆ ಪ್ರಗತಿಯಲ್ಲಿದೆ. ಆದರೆ, ಮೀಸಲಾತಿ ಹೆಚ್ಚಿರುವುದರ ಅನುಸಾರ ಹೊಸದಾಗಿ ಯಾವುದೇ ನೇಮಕಾತಿ ಅಥವಾ ಬಡ್ತಿ ನೀಡುವಂತಿಲ್ಲ ಎಂದು 2025 ರ ನವೆಂಬರ್ 27ರಂದು ಹೈಕೋರ್ಟ್ ಮಧ್ಯಂತರ ಆದೇಶ ನೀಡಿದೆ. ಹೀಗಾಗಿ ಅರ್ಜಿಗಳನ್ನು ನ್ಯಾಯಾಲಯ ನಿರ್ಧರಿಸುವವರೆಗೆ ಹೆಚ್ಚುವರಿ ಶೇಕಡ 6 ಮೀಸಲಾತಿ ಅನ್ವಯಿಸುವುದಿಲ್ಲ. ಹೈಕೋರ್ಟ್ ಆದೇಶ ಜಾರಿಯಲ್ಲಿರುವುದರಿಂದ ಶೇಕಡ 50ರ ಮೀಸಲಾತಿ ಅನುಸಾರವೇ ನೇಮಕಾತಿ ಪ್ರಕ್ರಿಯೆ ಮುಂದುವರೆಸಿ ಆದೇಶ ವಿತರಿಸಲಾಗುವುದು. ಉಳಿದ ಶೇಕಡ 6ಕ್ಕೆ ನ್ಯಾಯಾಲಯ ನಿರ್ಧಾರ ಮಾಡಿದ ನಂತರ ಆದೇಶ ನೀಡಲಾಗುವುದು. ಇದಕ್ಕೆ ಅವಕಾಶ ನೀಡಬೇಕೆಂದು ಮನವಿ ಮಾಡಿದ್ದಾರೆ. ಆಗ ನ್ಯಾಯ ಪೀಠ ಸರ್ಕಾರ ಈ ಕುರಿತು ಸೂಕ್ತ ಅರ್ಜಿ ಸಲ್ಲಿಸಿದರೆ ಪರಿಶೀಲಿಸುವುದಾಗಿ ಹೇಳಿ ವಿಚಾರಣೆಯನ್ನು ಫೆಬ್ರವರಿ 12ಕ್ಕೆ ಮುಂದೂಡಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular