ಸಮಾಜ ಕಲ್ಯಾಣ ಇಲಾಖೆಯ ಅಂಗಸಂಸ್ಥೆಯಾದ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಡಿ ಕಾರ್ಯನಿರ್ವಹಿಸುವ ವಿವಿಧ ವಸತಿ ಶಾಲೆಗಳ 6ನೇ ತರಗತಿ ಪ್ರವೇಶಾತಿಗೆ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
2026-27 ಶೈಕ್ಷಣಿಕ ಸಾಲಿಗೆ ಜಿಲ್ಲೆಯ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ, ಡಾ.ಬಿ.ಆರ್ ಅಂಬೇಡ್ಕರ್, ಗಾಂಧಿತತ್ವ, ಏಕಲವ್ಯ ಸೇರಿದಂತೆ ಒಟ್ಟು 21 ವಸತಿ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶಾತಿಗೆ ಪ್ರವೇಶ ಪ್ರಕ್ರಿಯೆ ಆರಂಭವಾಗಿದ್ದು, ಪ್ರಸ್ತುತ 5ನೇ ತರಗತಿ ಓದುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸಲು ಹತ್ತಿರದ ವಸತಿ ಶಾಲೆಯ ಪ್ರಾಂಶುಪಾಲರ ಕಚೇರಿಗೆ ಭೇಟಿ ನೀಡಬಹುದು. ಅನ್ ಲೈನ್ ಮೂಲಕ ಹತ್ತಿರದ ವಸತಿ ಶಾಲೆ, ಕಾಲೇಜುಗಳ ಮೂಲಕ ಅರ್ಜಿ ಸಲ್ಲಿಸಲು ಫೆ.02 ಕೊನೆಯ ದಿನವಾಗಿರುತ್ತದೆ. ಪ್ರವೇಶ ಪರೀಕ್ಷೆ ಮಾ.01 ರಂದು ನಡೆಯಲಿದೆ.
ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್ ಸೈಟ್ https://cetonline.karnataka.gov.in/kea/kreis2026 ಅಥವಾ ದೂ.08023-460460 ಗೆ ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಚಿದಾನಂದಪ್ಪ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

