HomeLatest NewsBREAKING: ಅಧಿವೇಶನ ಭಾಷಣದಲ್ಲಿ 11 ಪ್ಯಾರಾ ಕೈಬಿಡಲು ರಾಜ್ಯಪಾಲರ ಒತ್ತಡ

BREAKING: ಅಧಿವೇಶನ ಭಾಷಣದಲ್ಲಿ 11 ಪ್ಯಾರಾ ಕೈಬಿಡಲು ರಾಜ್ಯಪಾಲರ ಒತ್ತಡ

ಬೆಂಗಳೂರು: ನಾಳೆಯಿಂದ ಆರಂಭವಾಗಲಿರುವ ಜಂಟಿ ಸದನ ಉದ್ದೇಶಿಸಿ ಭಾಷಣ ಮಾಡಲು ನಿರಾಕರಿಸಿರುವ ರಾಜ್ಯಪಾಲರು 11 ಪ್ಯಾರಾಗಳನ್ನು ಕೈಬಿಡಲು ಸಲಹೆ ನೀಡಿದ್ದಾರೆ.

ನರೇಗಾ ಯೋಜನೆ ಕುರಿತಂತೆ 11 ಪ್ಯಾರಾಗಳಲ್ಲಿ ಉಲ್ಲೇಖವಿದೆ. ಕೇಂದ್ರದ ನೀತಿಯನ್ನು ಅದರಲ್ಲಿ ಉಲ್ಲೇಖಿಸಲಾಗಿದೆ. ಕಾರ್ಮಿಕರ ಕೆಲಸ ಕಸಿದುಕೊಂಡಿದ್ದರ ಬಗ್ಗೆ ಉಲ್ಲೇಖವಿದೆ. ಈ ವಿಚಾರವನ್ನು ಭಾಷಣದಲ್ಲಿ ಉಲ್ಲೇಖಿಸಿದ್ದಕ್ಕೆ ರಾಜ್ಯಪಾಲರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ರಾಜ್ಯಪಾಲರ ಭೇಟಿ ಮಾಡಿ ಮನವರಿಕೆ ಮಾಡಿ ಕೊಟ್ಟಿದ್ದೇವೆ. ಆದರೆ 11 ಪ್ಯಾರಾಗಳನ್ನು ಕೈಬಿಡಬೇಕೆಂದು ಸಲಹೆ ನೀಡಿದ್ದಾರೆ ಎಂದು ಸಚಿವ ಹೆಚ್.ಕೆ. ಪಾಟೀಲ್ ತಿಳಿಸಿದ್ದಾರೆ.

ಲೋಕಭವನದಲ್ಲಿ ರಾಜ್ಯಪಾಲರ ಭೇಟಿ ಬಳಿಕ ಅವರು ಮಾತನಾಡಿದರು. ರಾಜ್ಯ ಮತ್ತು ಕೇಂದ್ರ ಸರ್ಕಾರದ ನಡುವೆ ಸಂಬಂಧ ಪಟ್ಟ ಬಗ್ಗೆ ಭಾಷಣದಲ್ಲಿ ಉಲ್ಲೇಖವಿದೆ. ಆ ಪ್ಯಾರಾಗಳನ್ನು ಕೈಬಿಡುವಂತೆ ರಾಜ್ಯಪಾಲರು ಹೇಳಿದ್ದಾರೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಂವಿಧಾನದ ಪ್ರಕಾರ ಅವರು ಅಧಿವೇಶನಕ್ಕೆ ಬರಬೇಕು. ರಾಜ್ಯ ಸರ್ಕಾರದ ಭಾಷಣವನ್ನು ಓದಬೇಕು. ಆರ್ಟಿಕಲ್ 161, 163ರ ಪ್ರಕಾರ ರಾಜ್ಯಪಾಲರು ಭಾಷಣ ಓದಬೇಕು ಎಂದು ಹೆಚ್.ಕೆ. ಪಾಟೀಲ್ ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular