ಬೆಂಗಳೂರು: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ರಾಷ್ಟ್ರೀಯ ಅಧ್ಯಕ್ಷರಾಗಿ ಆಯ್ಕೆಯಾದ ಅರಣ್ಯ ಸಚಿವ ಬಿ. ಈಶ್ವರ ಖಂಡ್ರೆ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿನಂದಿಸಿದ್ದಾರೆ.
ಮಹಾಸಭಾ 24ನೇ ರಾಷ್ಟ್ರೀಯ ಅಧ್ಯಕ್ಷರಾಗಿರುವ ನಮ್ಮ ಪಕ್ಷದ ನಾಯಕರು, ಸಚಿವರಾದ ಈಶ್ವರ ಖಂಡ್ರೆ ಅವರನ್ನು ಅಭಿನಂದಿಸಿ ಶುಭ ಹಾರೈಸಿದ ಬಗ್ಗೆ ಸಿಎಂ ಮಾಹಿತಿ ಹಂಚಿಕೊಂಡಿದ್ದಾರೆ.
ಮಹಾಸಭಾ ರಾಷ್ಟ್ರೀಯ ಅಧ್ಯಕ್ಷರಾಗಿ ಈಶ್ವರ ಖಂಡ್ರೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ಹುದ್ದೆ ತೆರವಾಗಿತ್ತು. ಮಹಾಸಭಾ ಕಾರ್ಯಕಾರಿಣಿ ಸಭೆಯಲ್ಲಿ ಮಹಾ ಪ್ರಧಾನ ಕಾರ್ಯದರ್ಶಿ ಈಶ್ವರ ಖಂಡ್ರೆ ಅವರನ್ನು ರಾಷ್ಟ್ರೀಯ ಘಟಕದ ಅಧ್ಯಕ್ಷರಾಗಿ ಆಯ್ಕೆ ಮಾಡಲು ನಿರ್ಣಯ ಕೈಗೊಳ್ಳಲಾಗಿದೆ.

