HomeLatest Newsಮಾತೃವಂದನಾ ಯೋಜನೆಯಡಿ ಆರ್ಥಿಕ ಸೌಲಭ್ಯ; ನೋಂದಣಿ ಅಭಿಯಾನ

ಮಾತೃವಂದನಾ ಯೋಜನೆಯಡಿ ಆರ್ಥಿಕ ಸೌಲಭ್ಯ; ನೋಂದಣಿ ಅಭಿಯಾನ

ಮಡಿಕೇರಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕೇಂದ್ರ ಪುರಸ್ಕೃತ ಯೋಜನೆಗಳಲ್ಲೊಂದಾದ ಪ್ರಧಾನಮಂತ್ರಿ ಮಾತೃವಂದನಾ ಯೋಜನೆ ಸೌಲಭ್ಯ ಪಡೆಯಲು ಮೊದಲನೇ ಪ್ರಸವದ ಗರ್ಭಿಣಿಯರು ಮತ್ತು ಎರಡನೇ ಪ್ರಸವದಲ್ಲಿ ಹೆಣ್ಣು ಮಗು ಜನಿಸಿದ ಮಹಿಳೆಯರಿಂದ ನೋಂದಣಿ ಅಭಿಯಾನ ನಡೆಯಲಿದೆ.

ಮಹಿಳೆಯ ಮೊದಲ ಪ್ರಸವದ ಮತ್ತು ನಂತರದ ಸಾಕಷ್ಟು ವಿಶ್ರಾಂತಿಗಾಗಿ ಆಂಶಿಕ ಪರಿಹಾರವನ್ನು ಗರ್ಭಿಣಿ ಮತ್ತು ಬಾಣಂತಿಯರ ಆರೋಗ್ಯದಲ್ಲಿ ಸುಧಾರಣೆ ತರಲು ಪ್ರೋತ್ಸಾಹಧನದ ರೂಪದಲ್ಲಿ ವೇತನ ನಷ್ಟಕ್ಕಾಗಿ ನೀಡುವುದಾಗಿದೆ.

ಮೊದಲ ಮಗುವಿಗೆ ಎರಡು ಕಂತುಗಳಲ್ಲಿ ರೂ.5 ಸಾವಿರ, ಎರಡನೇ ಮಗು(ಹೆಣ್ಣು ಮಗುವಾಗಿರುವುದಕ್ಕೆ) ರೂ.6 ಸಾವಿರ ನೀಡಲಾಗುತ್ತದೆ. 

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸರ್ಕಾರಿ ನೌಕರರು ಮತ್ತು ಸಾರ್ವಜನಿಕ ಉದ್ದಿಮೆಗಳ ನೌಕರರನ್ನು ಹೊರತುಪಡಿಸಿ ಮೊದಲ ಪ್ರಸವದ ಗರ್ಭಿಣಿ ಮತ್ತು ಎರಡನೇ ಹೆಣ್ಣು ಮಗುವಿನ ಬಾಣಂತಿಯರು ಈ ಸೌಲಭ್ಯವನ್ನು ಪಡೆದುಕೊಳ್ಳಬಹುದಾಗಿದೆ. ಈ ಬಗ್ಗೆ ಮಡಿಕೇರಿ, ಸೋಮವಾರಪೇಟೆ, ಪೊನ್ನಂಪೇಟೆ ತಾಲ್ಲೂಕಿನ ಫಲಾನುಭವಿಗಳು ನಿಮ್ಮ ಹತ್ತಿರದ ಅಂಗನವಾಡಿ ಕೇಂದ್ರದಲ್ಲಿ ಅರ್ಜಿ ಸಲ್ಲಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಪ್ರಸನ್ನಕುಮಾರ್ ಅವರು ತಿಳಿಸಿದ್ದಾರೆ.

ನೋಂದಣಿಗೆ ಬೇಕಾಗುವ ದಾಖಲಾತಿಗಳು:

ಫಲಾನುಭವಿಯ ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ ಕಡ್ಡಾಯವಾಗಿ ಜೋಡಣೆಯಾಗಿರಬೇಕು. ತಾಯಿ ಕಾರ್ಡ್ ಮತ್ತು ಮಗುವಿನ ಲಸಿಕೆ ಮಾಹಿತಿಯ ಪ್ರತಿ, ಫಲಾನುಭವಿಯ ಆಧಾರ್ ಕಾರ್ಡ್(10 ವರ್ಷ ಕಳೆದಿರುವ ಆಧಾರ್ ಕಾರ್ಡ್ ಅಪ್ಟೇಟ್ ಆಗಿರಬೇಕು), ಪಡಿತರ ಚೀಟಿ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ನರೇಗಾ ಕಾರ್ಡ್, ಇ-ಶ್ರಮ್ ಕಾರ್ಡ್, ಆಯುಷ್ಮಾನ್ ಕಾರ್ಡ್(ಯಾವುದಾದರೂ ಒಂದರ ನಕಲು ಪ್ರತಿ) ಸಲ್ಲಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಾದ ಪ್ರಸನ್ನಕುಮಾರ್ ಅವರು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular