HomeJobsಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: ಎಲ್ಲಾ ಹುದ್ದೆ ನೇಮಕಾತಿಯಲ್ಲಿ 5 ವರ್ಷ ವಯೋಮಿತಿ ಸಡಿಲಿಕೆ ಸಾಧ್ಯತೆ

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: ಎಲ್ಲಾ ಹುದ್ದೆ ನೇಮಕಾತಿಯಲ್ಲಿ 5 ವರ್ಷ ವಯೋಮಿತಿ ಸಡಿಲಿಕೆ ಸಾಧ್ಯತೆ

ಬೆಂಗಳೂರು: ರಾಜ್ಯದ ಎಲ್ಲಾ ರೀತಿಯ ಸಿವಿಲ್ ಹುದ್ದೆಗಳಿಗೆ 2027ರ ಡಿಸೆಂಬರ್ 31ರವರೆಗೆ ಹೊರಡಿಸುವ ನೇಮಕಾತಿ ಅಧಿಸೂಚನೆಗಳಿಗೆ ಸಂಬಂಧಿಸಿದಂತೆ ಎಲ್ಲಾ ಪ್ರವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿಯನ್ನು ಐದು ವರ್ಷ ಸಡಿಲಗೊಳಿಸಲು ಸರ್ಕಾರ ತೀರ್ಮಾನಿಸಿದ್ದು, ಗುರುವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಅಧಿಕೃತ ನಿರ್ಣಯ ಕೈಗೊಳ್ಳುವ ಸಾಧ್ಯತೆ ಇದೆ.

ರಾಜ್ಯದಲ್ಲಿ ಒಳಮಿಸಲಾತಿ ಮತ್ತಿತರ ಕಾರಣಗಳಿಂದ ಎರಡು ವರ್ಷಗಳಿಂದ ನೇಮಕಾತಿ ವಿಳಂಬವಾಗಿದೆ. ಹೀಗಾಗಿ ಉದ್ಯೋಗಾಕಾಂಕ್ಷಿಗಳು ಹೋರಾಟ ನಡೆಸಿ ವಯೋಮಿತಿಯನ್ನು ಐದು ವರ್ಷ ಸಡಿಲಿಕೆ ಮಾಡುವಂತೆ ಒತ್ತಾಯಿಸಿದ್ದರು. ಸೆಪ್ಟೆಂಬರ್ 6ರಂದು ಎರಡು ವರ್ಷ ಒಳ ಮೀಸಲಾತಿ ಸಡಿಲಿಕೆ ಮಾಡಿ ಸರ್ಕಾರ ಆದೇಶಿಸಿದ್ದು, ಇದಕ್ಕೂ ವಿರೋಧ ಮುಂದುವರೆದ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7 ರಂದು 3 ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿತ್ತು.

ಎಸ್ಸಿ ಒಳ ಮೀಸಲಾತಿ ಪ್ರಕರಣ ನ್ಯಾಯಾಲಯದಲ್ಲಿದ್ದು, ಒಟ್ಟಾರೆ ಮೀಸಲಾತಿ ಪ್ರಮಾಣ ಶೇಕಡ 50ಕ್ಕೆ ಸೀಮಿತಗೊಳಿಸಬೇಕೆ ಅಥವಾ ಶೇಕಡ 56 ಕ್ಕೆ ಮೀಸಲಾತಿ ನೀಡಬಹುದೇ ಎಂಬುದು ಇನ್ನೂ ಇತ್ಯರ್ಥವಾಗಿಲ್ಲ. ಈ ಹಿನ್ನೆಲೆಯಲ್ಲಿ ನೇಮಕಾತಿ ಪ್ರಕ್ರಿಯೆ ಮತ್ತಷ್ಟು ವಿಳಂಬವಾಗುತ್ತಿದ್ದು, ಈ ಕಾರಣಕ್ಕಾಗಿ ಸಾವಿರಾರು ಮಂದಿ ವಯೋಮಿತಿ ಕಾರಣಕ್ಕಾಗಿ ಉದ್ಯೋಗ ಅರ್ಹತೆ ಕಳೆದುಕೊಳ್ಳುತ್ತಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹೀಗಾಗಿ ಸಿವಿಲ್ ಸೇವೆಗಳಿಗೆ ನೇರ ನೇಮಕಾತಿ ಹಾಗೂ ನೇಮಕಾತಿ ನಿಯಮಗಳಲ್ಲಿ ನಿಗದಿಪಡಿಸಿರುವ ಗರಿಷ್ಠ ವಯೋಮಿತಿಯಲ್ಲಿ ಒಂದು ಬಾರಿಗೆ ಅನ್ವಯವಾಗುವಂತೆ ಐದು ವರ್ಷ ಸಡಿಲಿಕೆ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಗುರುವಾರ ನಡೆಯುವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ. ಇದರಿಂದ ಉದ್ಯೋಗ ನಿರೀಕ್ಷೆಯಲ್ಲಿರುವ ಲಕ್ಷಾಂತರ ಅಭ್ಯರ್ಥಿಗಳಿಗೆ ಅನುಕೂಲವಾಗಲಿದೆ ಎಂದು ಹೇಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular