ಬೆಂಗಳೂರು: ವಿಧಾನ ಮಂಡಲ ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲರು ಭಾಷಣ ಮಾಡಲು ಬರದಿದ್ದರೆ ಅವರ ವಿರುದ್ಧ ಕಾನೂನು ಸಮರಕ್ಕೆ ಸರ್ಕಾರ ಮುಂದಾಗಿದೆ.
ಅಡ್ವೋಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ದೆಹಲಿಗೆ ತೆರಳಿದ್ದಾರೆ. ರಾಜ್ಯಪಾಲರು ಅಧಿವೇಶನಕ್ಕೆ ಬರದಿದ್ದರೆ, ಸುಪ್ರೀಂ ಕೋರ್ಟ್ ಸಿಜೆ ಮುಂದೆ ಅರ್ಜಿ ಸಲ್ಲಿಸಲು ನಿರ್ಧರಿಸಲಾಗಿದೆ. ಸಿಎಂ ಕಾನೂನು ಸಲಹೆಗಾರ ಎ.ಎಸ್. ಪೊನ್ನಣ್ಣ ಸಲಹೆಯಂತೆ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಲಾಗುವುದು.
ಎರಡು ಪ್ರಮುಖ ಅಂಶಗಳ ಮೇಲೆ ಗವರ್ನರ್ ಗೆ ನಿರ್ದೇಶನ ನೀಡಲು ಅರ್ಜಿ ಸಲ್ಲಿಸಲು ಸರ್ಕಾರ ಸಿದ್ಧತೆ ನಡೆಸಿದೆ. ಸರ್ಕಾರ ಸಿದ್ಧಪಡಿಸಿದ ಭಾಷಣವನ್ನು ಸದನದಲ್ಲಿ ರಾಜ್ಯಪಾಲರು ಓದಬೇಕು. ಅವರ ಕರ್ತವ್ಯವನ್ನು ರಾಜ್ಯಪಾಲರು ಪಾಲಿಸಬೇಕು. ಅವರು ಭಾಷಣ ಓದಲು ಬರದಿದ್ದರೆ ಸುಪ್ರೀಂಕೋರ್ಟ್ ಮಧ್ಯ ಪ್ರವೇಶಿಸಿ ಅವರಿಗೆ ನಿರ್ದೇಶನ ನೀಡಬೇಕು ಎಂದು ಕೋರಿ ಅರ್ಜಿ ಸಲ್ಲಿಸಲು ತಯಾರಿ ಮಾಡಿಕೊಳ್ಳಲಾಗಿದೆ. ಇಂದು ಬೆಳಗ್ಗೆ 11,15 ರವರೆಗೆ ಕಾದು ನೋಡಿ ರಾಜ್ಯಪಾಲರು ಸದನಕ್ಕೆ ಬರದಿದ್ದರೆ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಲಾಗುವುದು ಎನ್ನಲಾಗಿದೆ.

