HomeLatest Newsರೀಲ್ಸ್ ಹುಚ್ಚಿಗೆ ಯುವ ರೈತ ಬಲಿ: ತನ್ನದೇ ಟ್ರ್ಯಾಕ್ಟರ್ ಚಕ್ರಕ್ಕೆ ಸಿಲುಕಿ ಸಾವು

ರೀಲ್ಸ್ ಹುಚ್ಚಿಗೆ ಯುವ ರೈತ ಬಲಿ: ತನ್ನದೇ ಟ್ರ್ಯಾಕ್ಟರ್ ಚಕ್ರಕ್ಕೆ ಸಿಲುಕಿ ಸಾವು

ಕಲಬುರಗಿ: ಟ್ರ್ಯಾಕ್ಟರ್ ಚಲಿಸುವಾಗ ರೀಲ್ಸ್ ಮಾಡುತ್ತಿದ್ದ ಯುವ ರೈತ ಟ್ರ್ಯಾಕ್ಟರ್ ಚಕ್ರಕ್ಕೆ ಸಿಲುಕಿ ಮೃತಪಟ್ಟ ಘಟನೆ ಕಲಬುರಗಿ ಜಿಲ್ಲೆ ಕಮಲಾಪುರದಲ್ಲಿ ನಡೆದಿದೆ.

ಕಮಲಾಪುರದ ಲೋಕೇಶ್ ಪೂಜಾರಿ(23) ಮೃತಪಟ್ಟಯುವ ರೈತ. ಟ್ರಾಕ್ಟರ್ ಚಾಲಕನಾಗಿದ್ದ ಲೋಕೇಶ್ ಟ್ರಾಕ್ಟರ್ ಮಾಡುವಾಗ ಒಂದು ಕೈಯಲ್ಲಿ ಮೊಬೈಲ್ ಹಿಡಿದು ರೀಲ್ಸ್ ಮಾಡುತ್ತಾ ಇನ್ನೊಂದು ಕೈಯಲ್ಲಿ ಸ್ಟೇರಿಂಗ್ ಹಿಡಿದುಕೊಂಡಿದ್ದಾನೆ. ಆಯತಪ್ಪಿ ಕೆಳಗೆ ಬಿದ್ದ ಆತನ ಮೇಲೆ ಟ್ರ್ಯಾಕ್ಟರ್ ಚಕ್ರ ಹತ್ತಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಚಾಲಕನಿಲ್ಲದೆ ಟ್ರ್ಯಾಕ್ಟರ್ ಚಲಿಸುತ್ತಿರುವುದನ್ನು ಕಂಡ ಪಕ್ಕದ ಹೊಲದವರು ಬಂದು ನೋಡಿದಾಗ ಲೋಕೇಶ್ ಪೂಜಾರಿ ಮೃತಪಟ್ಟಿರುವುದು ಗೊತ್ತಾಗಿದೆ. ಪೊಲೀಸರಿಗೆ ಮಾಹಿತಿ ನೀಡಲಾಗಿದೆ. ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಮಹಾಗಾಂವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular