HomeLatest NewsSSLC, ಪಿಯುಸಿ, ಪದವೀಧರರಿಗೆ ಗುಡ್ ನ್ಯೂಸ್: 30ಕ್ಕೂ ಹೆಚ್ಚು ಕಂಪನಿಗಳಲ್ಲಿ ಉದ್ಯೋಗಾವಕಾಶ

SSLC, ಪಿಯುಸಿ, ಪದವೀಧರರಿಗೆ ಗುಡ್ ನ್ಯೂಸ್: 30ಕ್ಕೂ ಹೆಚ್ಚು ಕಂಪನಿಗಳಲ್ಲಿ ಉದ್ಯೋಗಾವಕಾಶ

ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಬೆಳಗಾವಿ ಹಾಗೂ 1ಎಂ1ಬಿ ಸಂಸ್ಥೆಯ ಸಹಯೋಗದಲ್ಲಿ ಕೊಪ್ಪಳ ಜಿಲ್ಲೆಯ ತಳಕಲ್‌ನಲ್ಲಿರುವ ವಿಟಿಯು ಸ್ನಾತಕೋತ್ತರ ಮತ್ತು ಕೌಶಲ್ಯಾಭಿವೃದ್ಧಿ ಕೇಂದ್ರದಲ್ಲಿ ಜನವರಿ 25 ರಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಉದ್ಯೋಗಮೇಳವನ್ನು ಆಯೋಜಿಸಲಾಗಿದೆ.

ಉದ್ಯೋಗಮೇಳದಲ್ಲಿ 30 ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸಲಿದ್ದು, 10ನೇ ತರಗತಿ, ಪಿಯುಸಿ, ಪದವಿ ಹಾಗೂ ಸ್ನಾತಕೋತ್ತರ ಪದವಿ ಪಡೆದ ಎಲ್ಲಾ ವಿಭಾಗಗಳ ವಿದ್ಯಾರ್ಥಿಗಳು ಮತ್ತು ಉದ್ಯೋಗಾಕಾಂಕ್ಷಿಗಳು ಉದ್ಯೋಗಮೇಳದ ನೇರ ಸಂದರ್ಶನದಲ್ಲಿ ಭಾಗವಹಿಸಿ, ಉದ್ಯೋಗದ ನೆರವನ್ನು ಪಡೆಯಬಹುದು. ಆಸಕ್ತರು ಜನವರಿ 23, 24 ರಂದು ಪೂರ್ವ ನೋಂದಣಿ ಮಾಡಿಕೊಳ್ಳಬಹುದು ಎಂದು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಪ್ರಕಟಣೆ ತಿಳಿಸಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular