HomeLatest Newsಸ್ವಂತ ಸೂರು ಹೊಂದುವ ಕನಸು ಕಂಡವರಿಗೆ ಗುಡ್ ನ್ಯೂಸ್: ಜ. 24ರಂದು 42 ಸಾವಿರ ಮನೆಗಳ...

ಸ್ವಂತ ಸೂರು ಹೊಂದುವ ಕನಸು ಕಂಡವರಿಗೆ ಗುಡ್ ನ್ಯೂಸ್: ಜ. 24ರಂದು 42 ಸಾವಿರ ಮನೆಗಳ ಹಂಚಿಕೆ

ಕೊಳಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ ಜನವರಿ 24 ರಂದು 42,345 ಬಡ ಕುಟುಂಬಗಳಿಗೆ ಮನೆಗಳ ಹಂಚಿಕೆ ಮಾಡಲಾಗುವುದು. ಜನವರಿ 24 ರಂದು ಬೆಳಿಗ್ಗೆ 11 ಗಂಟೆಗೆ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ.  ಕಾರ್ಯಕ್ರಮಕ್ಕೆ ಸುಮಾರು 2 ಲಕ್ಷಕ್ಕೂ ಅಧಿಕ ಜನರು ಪಾಲ್ಗೊಳ್ಳುವ ನಿರೀಕ್ಷೆಯಿದೆ ಎಂದು ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಅವರು ಹೇಳಿದರು.‌

ಹುಬ್ಬಳ್ಳಿಯ ಮಂಟೂರು ರಸ್ತೆಯಲ್ಲಿ ಹಮ್ಮಿಕೊಂಡಿರುವ ಬೃಹತ್ ಕಾರ್ಯಕ್ರಮದ ಪೂರ್ವ ಸಿದ್ಧತೆಗಳನ್ನು ಪರಿಶೀಲಿಸಿ ನಂತರ ಮಾಧ್ಯಮದರೊಂದಿಗೆ ಮಾತನಾಡಿದ ಅವರು, ಈ ಕಾರ್ಯಕ್ರಮಕ್ಕೆ ರಾಜ್ಯಸಭೆ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಗೃಹ ಸಚಿವ ಡಾ.ಜಿ.ಪರಮೇಶ್ವರ, ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಸೇರಿದಂತೆ ಸಚಿವರು, ಶಾಸಕರು, ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ ಎಂದರು.

ಕಾರ್ಯಕ್ರಮಕ್ಕೆ ಆಗಮಿಸುವ ಸಾರ್ವಜನಿಕರ ಸುಗಮ ಸಂಚಾರಕ್ಕಾಗಿ ಕಾರ್ಯಕ್ರಮ ಸ್ಥಳದಲ್ಲಿ 6 ಕಡೆಯಿಂದ ಕಾರ್ಯಕ್ರಮಕ್ಕೆ ಆಗಮಿಸಲು ರಸ್ತೆ, ಪ್ರವೇಶ ವ್ಯವಸ್ಥೆ ಮಾಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸುಮಾರು 2 ಸಾವಿರಕ್ಕೂ ಅಧಿಕ ಬಸ್ ಗಳು, 7 ಸಾವಿರಕ್ಕೂ ಹೆಚ್ಚು ಕಾರ್, ಟ್ಯಾಕ್ಸಿಗಳು ಸೇರಿದಂತೆ ದ್ವಿ ಚಕ್ರ ವಾಹನಗಳಲ್ಲಿ ಫಲಾನುಭವಿಗಳು, ಸಾರ್ವಜನಿಕರು ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ.

ಟ್ರಾಫಿಕ್ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ನಿರ್ವಹಣೆ ಮಾಡಲಾಗುವುದು. ಸಾರ್ವಜನಿಕರು ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಬೇಕು. ಬೃಹತ್ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ. ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಪ್ರಸಾದ್ ಅಬ್ಬಯ್ಯ ಅವರ ಉಸ್ತುವಾರಿಯಲ್ಲಿ ಪೂರ್ವಸಿದ್ಧತಾ ಕಾರ್ಯಗಳು ಅಚ್ಚುಕಟ್ಟಾಗಿ ನಡೆಯುತ್ತಿವೆ ಎಂದು ತಿಳಿಸಿದರು.

300ಕ್ಕೂ ಹೆಚ್ಚು ಊಟದ ಕೌಂಟರ್ ಗಳನ್ನು ತೆರೆಯಲಾಗುವುದು. ಸಾವಿರಾರು ಸಂಖ್ಯೆಯಲ್ಲಿ ಫಲಾನುಭವಿಗಳು ಪಾಲ್ಗೊಳ್ಳುತ್ತಿದ್ದಾರೆ. ಅದರ ಜೊತೆಗೆ ನಾಲ್ಕು ಜಿಲ್ಲೆಗಳಿಂದ ಫಲಾನುಭವಿಗಳು, ಅಭಿಮಾನಿಗಳು, ಕಾರ್ಯಕರ್ತರು, ಸಾರ್ವಜನಿಕರು ಭಾಗವಹಿಸುವರು. ಗುಣಮಟ್ಟದ ಮನೆಗಳನ್ನು ನಿರ್ಮಾಣ ಮಾಡಲಾಗಿದೆ. ಮುಂಬರುವ ಬಜೆಟ್ ನಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚು ಹೆಚ್ಚು ಮನೆಗಳನ್ನು ನಿರ್ಮಿಸಲಾಗುವುದು ಎಂದರು. 

ಕೊಳಗೇರಿ ಅಭಿವೃದ್ಧಿ ಮಂಡಳಿಯಿಂದ ಬಡವರಿಗೆ ಉತ್ತಮ ಮನೆಗಳನ್ನು ನಿರ್ಮಿಸಿ, ವಿತರಣೆ ಮಾಡಲಾಗುತ್ತಿದೆ. ಆಸ್ಪತ್ರೆ, ಗ್ರಂಥಾಲಯ, ಶಾಪಿಂಗ್ ಮಾಲ್ ಸಹ ಇದು ಒಳಗೊಂಡಿರಲಿದೆ. ಬಾಲ್ಕನಿ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಬಹಳ ಸುಂದರವಾಗಿ ಮನೆಗಳನ್ನು ನಿರ್ಮಿಸಲಾಗಿದೆ. ಮನೆಗಳ ನಿರ್ಮಾಣದ ಶೈಲಿ ನನಗೆ ತೃಪ್ತಿ ತಂದಿದೆ. ಬೆಂಗಳೂರಿನ ಗೇಟೆಡ್ ಕಮ್ಯುನಿಟಿ ಮಾದರಿ ಮನೆಗಳನ್ನು ಕಟ್ಟಲಾಗಿದೆ. ಮನೆಗಳನ್ನು ಫಲಾನುಭವಿಗಳಿಗೆ ವಿತರಿಸಿದ ಬಳಿಕ ಅವರು ಸ್ವಚ್ಛಂದವಾಗಿ ಮನೆಗಳನ್ನು ಇಟ್ಟುಕೊಳ್ಳಲಿದ್ದಾರೆ ಎಂದು ಅವರು ಹೇಳಿದರು.

ಈ ಸಂದರ್ಭದಲ್ಲಿ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ಅಧ್ಯಕ್ಷರಾದ ಶಾಸಕ ಪ್ರಸಾದ್ ಅಬ್ಬಯ್ಯ, ಪ್ರಭಾರ ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ್, ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್, ಡಿಸಿಪಿಗಳಾದ ರವೀಶ ಸಿ.ಆರ್., ಮಹಾನಿಂಗ ನಂದಗಾವಿ, ಪ್ರೊಬೇಷನರಿ ಐಎಎಸ್ ಅಧಿಕಾರಿ ರಿತೀಕಾ ವರ್ಮಾ, ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಆಯುಕ್ತ ಡಾ. ರುದ್ರೇಶ ಗಾಳಿ, ಹುಬ್ಬಳ್ಳಿ ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಸಂತೋಷ್ ಬಿರಾದಾರ, ಉಪವಿಭಾಗಾಧಿಕಾರಿ ಶಾಲಂ ಹುಸೇನ್, ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಮಾಜಿ ಅಧ್ಯಕ್ಷ ಸದಾನಂದ ಡಂಗನವರ, ಮುಖಂಡರಾದ ಅಲ್ತಾಫ್ ಹಳ್ಳೂರ್, ಅನಿಲಕುಮಾರ ಪಾಟೀಲ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಇತರರು ಉಪಸ್ಥಿತರಿದ್ದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular