ಬೆಂಗಳೂರು : ಬೈಕ್ ಶೋರೂಂ ನಲ್ಲಿ ಅಗ್ನಿ ಅವಘಡ ಸಂಭವಿಸಿ 13 ಎಲೆಕ್ಟ್ರಿಕಲ್ ಬೈಕ್ ಸುಟ್ಟು ಭಸ್ಮವಾದ ಘಟನೆ ಕೆ ಆರ್ ಪುರದ ಟಿಸಿ ಪಾಳ್ಯ ಸಿಗ್ನಲ್ ಬಳಿ ನಡೆದಿದೆ.
ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿದೆ ಎಂದು ಹೇಳಲಾಗುತ್ತಿದ್ದು,ಬುಧವಾರ ರಾತ್ರಿ 9:30 ರ ಸುಮಾರಿಗೆ ಅವಘಡ ನಡೆದಿದೆ . ಬೆಂಕಿ ತಗುಲುತ್ತಿದ್ದಂತೆ ಸಿಬ್ಬಂದಿ ಹೊರಗಡೆ ಓಡಿ ಬಂದು ಜೀವ ಉಳಿಸಿಕೊಂಡಿದ್ದಾರೆ. ಬೆಂಕಿ ಕೆನ್ನಾಲಿಗೆಗೆ ಸಿಲುಕಿ 13 ಬೈಕ್ ಗಳು ಸುಟ್ಟು ಕರಕಲಾಗಿದೆ.
ಬೆಂಕಿ ತಗುಲಿದ ಸುದ್ದಿ ತಿಳಿದ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸಿದ್ದಾರೆ. ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡಿರಬಹುದೆಂದು ಶಂಕಿಸಲಾಗಿದೆ. ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಅದೃಷವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

