HomeKarnatakaBIG NEWS: ಆರ್.ಎಸ್.ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಮತ್ತೊಂದು FIR ದಾಖಲು

BIG NEWS: ಆರ್.ಎಸ್.ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಮತ್ತೊಂದು FIR ದಾಖಲು

ಮಂಗಳೂರು: ಆರ್.ಎಸ್.ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಮತ್ತೊಂದು ಪ್ರಕರಣ ದಾಖಲಾಗಿದೆ. ಪ್ರಚೋದನಕಾಅರಿ ಭಾಷಣ ಹಿನ್ನೆಲೆಯಲ್ಲಿ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.

ಪುತ್ತೂರಿನ ಖಾಸಗಿ ಕಾಲೇಜಿನಲ್ಲಿ ಜನವರಿ 21ರಂದು ನಡೆದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಆರ್.ಎಸ್.ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್, ಕೋಮುದ್ವೇಷ ಭಾಷಣ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಪುತ್ತೂರು ನಿವಾಸಿ ರಾಮಚಂದ್ರ ಕೆ. ಎಂಬುವವರು ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಪುತ್ತೂರು ಠಾಣೆಯಲ್ಲಿ ದೂರು ದಾಖಲಿಸಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಹಿನ್ನೆಲೆಯಲ್ಲಿ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಸಾಮಾಜಿಕ ಸಾಮರಸ್ಯಕ್ಕೆ ಧಕ್ಕೆ ಹಾಗೂ ಹಿಂಸೆಗೆ ಪ್ರಚೋದನೆ ನೀಡಿದ ಆರೋಪದಲ್ಲಿ ಪುತ್ತೂರು ನಗರ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ. ಇದೇ ವೇಳೆ ಕಲ್ಲಡ್ಕ ಪ್ರಭಾಕರ್ ಭಟ್ ಅವರ ಈ ಭಾಷಣ ಪ್ರಸಾರ ಮಾಅಡಿದ ವಿಕಸನ ಟಿವಿ ಯೂಟ್ಯೂಬ್ ಚಾನಲ್ ಹಾಗೂ ಆಯೋಜಕರ ವಿರುದ್ಧವೂ ದೂರು ದಾಖಲಾಗಿದೆ.

ಖಾಸಗಿ ಕಾಲೇಇನಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗಿಯಾಗಿಇದ್ದ ಕಲ್ಲಡ್ಕ ಪ್ರಭಾಕರ್ ಭಟ್, ಪ್ರಚೋದನಕಾರಿ ಭಾಷಣ ಮಾಡುವ ಮೂಲಕ ವಿದ್ಯಾರ್ಥಿಗಳು ಹಾಗೂ ಪೋಷಕರ ಎದುರು ವಿವಾದಾತ್ಮಕ ಹೇಳಿಕೆಗಳನ್ನು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಭಾರತೀಯ ನ್ಯಾಯ ಸಂಹಿತೆ ಅಡಿಯಲ್ಲಿ ಕೇಸ್ ದಾಖಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular