HomeLatest NewsBIG NEWS : ರಾಜ್ಯದ ಎಲ್ಲಾ ಸರ್ಕಾರಿ ಅಧಿಕಾರಿಗಳು ಜನಪ್ರತಿನಿಧಿಗಳ ಕರೆ ಸ್ವೀಕರಿಸುವುದು ಕಡ್ಡಾಯ...

BIG NEWS : ರಾಜ್ಯದ ಎಲ್ಲಾ ಸರ್ಕಾರಿ ಅಧಿಕಾರಿಗಳು ಜನಪ್ರತಿನಿಧಿಗಳ ಕರೆ ಸ್ವೀಕರಿಸುವುದು ಕಡ್ಡಾಯ : ಸರ್ಕಾರ ಆದೇಶ.!

ಬೆಂಗಳೂರು :   ಎಲ್ಲಾ ಅಧಿಕಾರಿಗಳು ಜನಪ್ರತಿನಿಧಿಗಳಾದ ಮಾನ್ಯ ವಿಧಾನಸಭಾ ಹಾಗೂ ವಿಧಾನಪರಿಷತ್ತಿನ ಸದಸ್ಯರು ಮತ್ತು ಮಾನ್ಯ ಲೋಕಸಭಾ ಹಾಗೂ ಸಭಾ ರಾಜ್ಯ ಸಭಾ ಸದಸ್ಯರುಗಳ ದೂರವಾಣಿ ಸಂಖ್ಯೆಯನ್ನು ತಮ್ಮ ಬಳಿ ಕಡ್ಡಾಯವಾಗಿ ಇಟ್ಟುಕೊಳ್ಳತಕ್ಕದ್ದು ಎಂದು ಸರ್ಕಾರ ಆದೇಶ ಹೊರಡಿಸಿದೆ. ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ  ಡಾ. ಶಾಲಿನಿ ರಜನೀಶ್ ಈ ಆದೇಶ ಹೊರಡಿಸಿದ್ದಾರೆ.

ಕರ್ನಾಟಕ ವಿಧಾನ ಪರಿಷತ್ತಿನ ಮಾನ್ಯ ಸಭಾಪತಿಯವರ ದಿನಾಂಕ:16.12.2025ರ ಪತ್ರದಲ್ಲಿ ತಿಳಿಸಿದಂತೆ, ರಾಜ್ಯದ ವಿವಿಧ ಭಾಗಗಳಿಂದ ಸಾರ್ವಜನಿಕರು ಅವರ ಸಮಸ್ಯೆಗಳನ್ನು ಮತ್ತು ಕುಂದು ಕೊರತೆಗಳನ್ನು ಪರಿಹರಿಸಿಕೊಳ್ಳುವ ಉದ್ದೇಶದಿಂದ ಮಾನ್ಯ ವಿಧಾನಸಭಾ ಹಾಗೂ ವಿಧಾನಪರಿಷತ್ತಿನ ಸದಸ್ಯರುಗಳಿಗೆ ವಿನಂತಿಸಿಕೊಂಡಾಗ ಅನಿವಾರ್ಯವಾಗಿ ಸಂಬಂಧಿಸಿದ ಅಧಿಕಾರಿಗಳಿಗೆ ದೂರವಾಣಿ ಕರೆ ಮಾಡಬೇಕಾಗಿರುತ್ತದೆ. ಅಂತಹ ಸಂದರ್ಭಗಳಲ್ಲಿ ಜನಪ್ರತಿನಿಧಿಗಳ ದೂರವಾಣಿ ಕರೆಗಳನ್ನು ಕೆಲವು ಅಧಿಕಾರಿಗಳು ಸ್ವೀಕರಿಸದೇ ಇರುವುದು ಹಾಗೂ ಒಂದು ವೇಳೆ ಆ ಸಮಯದಲ್ಲಿ ಬೇರೆ ತುರ್ತು ಕಾರ್ಯದಲ್ಲಿ ನಿರತರಾಗಿದ್ದಲ್ಲಿ ತದನಂತರ ಸೌಜನ್ಯಕ್ಕಾದರೂ ಮರು ಕರೆ ಮಾಡದೆ ಇರುವುದು ನನ್ನ ಗಮನಕ್ಕೆ ಬಂದಿದೆ.

ಈ ಎಲ್ಲಾ ಅಂಶಗಳ ಹಿನ್ನೆಲೆಯಲ್ಲಿ ಇನ್ನು ಮುಂದೆ ಎಲ್ಲಾ ಅಧಿಕಾರಿಗಳು ಜನಪ್ರತಿನಿಧಿಗಳಾದ ಮಾನ್ಯ ವಿಧಾನಸಭಾ ಹಾಗೂ ವಿಧಾನಪರಿಷತ್ತಿನ ಸದಸ್ಯರು ಮತ್ತು ಮಾನ್ಯ ಲೋಕಸಭಾ ಹಾಗೂ ಸಭಾ ರಾಜ್ಯ ಸಭಾ ಸದಸ್ಯರುಗಳ ದೂರವಾಣಿ ಸಂಖ್ಯೆಯನ್ನು ತಮ್ಮ ಬಳಿ ಕಡ್ಡಾಯವಾಗಿ ಇಟ್ಟುಕೊಳ್ಳತಕ್ಕದ್ದು ಹಾಗೂ ಅವರು ಕರೆ ಮಾಡಿದಾಗ ಕರೆಯನ್ನು ಸ್ವೀಕರಿಸುವುದು, ಒಂದು ವೇಳೆ ತಾವು ಅನ್ಯ ಕರ್ತವ್ಯದಲ್ಲಿ ನಿರತರಾಗಿದ್ದಲ್ಲಿ ಅವರುಗಳಿಗೆ ತಮ್ಮ ಕರ್ತವ್ಯ ಮುಗಿದ ನಂತರ ಮರು ಕರೆಯನ್ನು ಮಾಡುವುದರ ಮೂಲಕ ಸೂಕ್ತವಾಗಿ ಸಮಸ್ಯೆಗಳ ಕುರಿತು ಸ್ಪಂದಿಸುವಂತೆ ಈ ಮೂಲಕ ಸೂಚನೆಯನ್ನು ನೀಡಿದೆ. ಸದರಿ ಸೂಚನೆಯನ್ನು ತಮ್ಮ ಆಪ್ತ ಶಾಖೆ ಸಿಬ್ಬಂದಿಗಳಿಗೂ ನೀಡಲು ಕೋರಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular