ಬೆಂಗಳೂರು : ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ನಾಳೆ ‘ರಾಷ್ಟ್ರೀಯ ಮತದಾರರ ದಿನ’ ಆಚರಿಸುವಂತೆ ಸರ್ಕಾರ ಆದೇಶ ಹೊರಡಿಸಿದೆ.ಸರ್ಕಾರಿ ಅಧೀನ ಕಛೇರಿಗಳಲ್ಲಿ ಪ್ರತಿಜ್ಞಾ ವಿಧಿ ಬೋಧನೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲು ಹಾಗೂ ಇದರೊಂದಿಗೆ ಲಗತ್ತಿಸಿರುವ “ರಾಷ್ಟ್ರೀಯ ಮತದಾರರ ದಿನಾಚರಣೆ” ಯ Logo ವನ್ನು ಅಧಿಕೃತ ಸ್ಟೇಷನರಿ, ಸರಕು, ವೆಬ್ಸೈಟ್ಗಳಲ್ಲಿ ಸೂಕ್ತವಾಗಿ ಉಪಯೋಗಿಸುವಂತೆ ಹಾಗೂ #NVD2026 ಹ್ಯಾಶ್ಟ್ಯಾಗ್ ಉಪಯೋಗಿಸಿ ಈ ದಿನಾಚರಣೆಗೆ ಸಂಬಂಧಿಸಿದಂತೆ ನಡೆಸುವ ಚಟುವಟಿಕೆಗಳ ಬಗ್ಗೆ ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಸಾಧ್ಯವಾದಲ್ಲಿ ಚಿತ್ರಗಳನ್ನು ಅಪ್ಲೋಡ್ ಮಾಡುವಂತೆ ಹಾಗೂ ಸಂಬಂಧಪಟ್ಟವರಿಗೆ ಸೂಕ್ತ ಸೂಚನೆಗಳನ್ನು ತಪ್ಪದೇ ನೀಡುವಂತೆ ಸೂಚಿಸಲಾಗಿದೆ.
ಏನಿದೆ ಆದೇಶದಲ್ಲಿ..?
ಪ್ರತಿ ವರ್ಷವೂ ಜನವರಿ 25 ನೇ ತಾರೀಖಿನಂದು “ರಾಷ್ಟ್ರೀಯ ಮತದಾರರ ದಿನಾಚರಣೆ” ಯ ಪ್ರತಿಜ್ಞಾ ಬೋಧನಾ ಕಾರ್ಯಕ್ರಮವನ್ನು ಕೈಗೊಳ್ಳಲಾಗುತ್ತಿದೆ. ಆದರೆ ಈ ಬಾರಿ ಜನವರಿ 25 ನೇ ತಾರೀಖಿನಂದು ಸಾರ್ವತ್ರಿಕ ರಜಾ ದಿನವಾದ್ದರಿಂದ, ಈ ವರ್ಷ ಜನವರಿ 23, 2026 ರ ಶುಕ್ರವಾರದಂದು ” ರಾಷ್ಟ್ರೀಯ ಮತದಾರರ ದಿನಾಚರಣೆ” ಆಚರಿಸುವಂತೆ ಉಲ್ಲೇಖಿತ ಪತ್ರದಲ್ಲಿ ತಿಳಿಸಿರುವ ಹಿನ್ನೆಲೆಯಲ್ಲಿ, ಸದರಿ ದಿನದಂದು, ತಮ್ಮ ಅಧೀನ ಕಛೇರಿಗಳಲ್ಲಿಯೂ ಪ್ರತಿಜ್ಞಾ ವಿಧಿ ಬೋಧನೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲು ಹಾಗೂ ಇದರೊಂದಿಗೆ ಲಗತ್ತಿಸಿರುವ “ರಾಷ್ಟ್ರೀಯ ಮತದಾರರ ದಿನಾಚರಣೆ” ಯ Logo ವನ್ನು ಅಧಿಕೃತ ಸ್ಟೇಷನರಿ, ಸರಕು, ವೆಬ್ಸೈಟ್ಗಳಲ್ಲಿ ಸೂಕ್ತವಾಗಿ ಉಪಯೋಗಿಸುವಂತೆ ಹಾಗೂ #NVD2026 ಹ್ಯಾಶ್ಟ್ಯಾಗ್ ಉಪಯೋಗಿಸಿ ಈ ದಿನಾಚರಣೆಗೆ ಸಂಬಂಧಿಸಿದಂತೆ ನಡೆಸುವ ಚಟುವಟಿಕೆಗಳ ಬಗ್ಗೆ ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಸಾಧ್ಯವಾದಲ್ಲಿ ಚಿತ್ರಗಳನ್ನು ಅಪ್ಲೋಡ್ ಮಾಡುವಂತೆ ಹಾಗೂ ಸಂಬಂಧಪಟ್ಟವರಿಗೆ ಸೂಕ್ತ ಸೂಚನೆಗಳನ್ನು ತಪ್ಪದೇ ನೀಡುವಂತೆ ತಮ್ಮನ್ನು ಕೋರಲು ನಿರ್ದೇಶಿಸಲ್ಪಟ್ಟಿದ್ದೇನೆ. “ರಾಷ್ಟ್ರೀಯ ಮತದಾರರ ದಿನಾಚರಣೆ” ಯ ಪ್ರತಿಜ್ಞಾವಿಧಿಯ ಕನ್ನಡ ಅವತರಣಿಕೆಯ ಪ್ರತಿಯನ್ನು ಇದರೊಂದಿಗೆ ಲಗತ್ತಿಸಿದೆ.




