HomeFeatured Newsಗುರುವಾರ ದೇಶಾದ್ಯಂತ ಸುದ್ದಿ ಮಾಡಿದ ಥಾವರ್ ಚಂದ್ ಗೆಹ್ಲೋಟ್ ಪರಿಚಯ

ಗುರುವಾರ ದೇಶಾದ್ಯಂತ ಸುದ್ದಿ ಮಾಡಿದ ಥಾವರ್ ಚಂದ್ ಗೆಹ್ಲೋಟ್ ಪರಿಚಯ

ಕರ್ನಾಟಕದ ರಾಜ್ಯಪಾಲರಾದ 77 ವರ್ಷದ ಥಾವರ್ ಚಂದ್ ಗೆಹ್ಲೋಟ್ ಗುರುವಾರ ದೇಶಾದ್ಯಂತ ಸುದ್ದಿ ಮಾಡಿದ್ದಾರೆ. ಕರ್ನಾಟಕ ವಿಧಾನಸಭೆ ಜಂಟಿ ಅಧಿವೇಶನದಲ್ಲಿ ಸರ್ಕಾರದ ಅನುಮೋದಿತ ಭಾಷಣ ಓದದೇ ಅವರು ವಿಧಾನಸಭೆಯಿಂದ ಹೊರ ನಡೆದಿದ್ದಾರೆ.

ಕಾಂಗ್ರೆಸ್ ಆಡಳಿತ ಇರುವ ಕರ್ನಾಟಕದಲ್ಲಿ ಥಾವರ್ ಚಂದ್ ಗೆಹ್ಲೋಟ್ ನಡೆ ಆಕ್ರೋಶಕ್ಕೆ ಕಾರಣವಾಗಿದೆ. ಕರ್ನಾಟಕ ಸರ್ಕಾರ ಮತ್ತು ಲೋಕಭವನದ ನಡುವೆ ರಾಜಕೀಯ ಜಟಾಪಟಿಗೆ ಕಾರಣವಾಗಿದೆ.

ಥಾವರ್ ಚಂದ್ ಗೆಹ್ಲೋಟ್ ಕರ್ನಾಟಕದ 19ನೇ ರಾಜ್ಯಪಾಲರು. ಜುಲೈ 6ರಂದು ಥಾವರ್ ಚಂದ್ ಗೆಹ್ಲೋಟ್ ಅವರನ್ನು ಕರ್ನಾಟಕದ ರಾಜ್ಯಪಾಲರಾಗಿ ನೇಮಕ ಮಾಡಲಾಯಿತು. ಜುಲೈ 11, 2021ರಂದು  ಅವರು ಕರ್ನಾಟಕದ ರಾಜ್ಯಪಾಲರಾಗಿ ಅಧಿಕಾರ ವಹಿಸಿಕೊಂಡರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಥಾವರ್ ಚಂದ್ ಗೆಹ್ಲೋಟ್ ಅಧಿಕಾರ ಸ್ವೀಕಾರ ಮಾಡಿದ ಬಳಿಕ ಇದೇ ಮೊದಲ ಬಾರಿಗೆ ದೊಡ್ಡ ಮಟ್ಟದಲ್ಲಿ ಸರ್ಕಾರ ಮತ್ತು ಲೋಕಭವನದ ನಡುವೆ ಜಟಾಪಟಿ ಆಗಿದೆ. ಈ ವರ್ಷದ ಮೊದಲ ಅಧಿವೇಶನಕ್ಕೆ ಆಗಮಿಸಿದ್ದ ಅವರು ಮೂರು ಸಾಲಿನ ಭಾಷಣ ಓದುವ ಮೂಲಕ ಸುದ್ದಿ ಮಾಡಿದ್ದಾರೆ. ಆಡಳಿತ ಪಕ್ಷ ಕಾಂಗ್ರೆಸ್ ಆಕ್ರೋಶಕ್ಕೆ ಗುರಿಯಾಗಿದ್ದಾರೆ.

ಕರ್ನಾಟಕ ಮತ್ತು ಥಾವರ್ ಚಂದ್ ಗೆಹ್ಲೋಟ್ ನಂಟು ತುಂಬಾ ಹಿಂದಿನದು. ಅವರು ಬಿಜೆಪಿಯ ಸಕ್ರಿಯ ಕಾರ್ಯಕರ್ತರಾಗಿದ್ದಾಗ ಅವರನ್ನು ಕರ್ನಾಟಕ ರಾಜ್ಯದ ಉಸ್ತುವಾರಿಯಾಗಿ ಪಕ್ಷ ನೇಮಕ ಮಾಡಿತ್ತು. ಈಗ ಸಂವಿಧಾನಿಕ ಹುದ್ದೆಯಲ್ಲಿರುವ ಅವರು ರಾಜ್ಯದ ರಾಜ್ಯಪಾಲರಾಗಿ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ.

ಥಾವರ್ ಚಂದ್ ಗೆಹ್ಲೋಟ್ ಪರಿಚಯ

  • ಥಾವರ್ ಚಂದ್ ಗೆಹ್ಲೋಟ್ ಮಧ್ಯ ಪ್ರದೇಶ ರಾಜ್ಯದವರು. ದಲಿತ ಸಮುದಾಯಕ್ಕೆ ಸೇರಿದ ಅವರು 1948, ಮೇ 1ರಂದು ಜನಿಸಿದರು. ಬಿಜೆಪಿಯ ನಿಷ್ಠಾವಂತ ಕಾರ್ಯಕರ್ತರಾದ ಅವರು ಶಾಸಕರಾಗಿ, ಸಚಿವರಾಗಿ, ಕೇಂದ್ರ ಸಚಿವರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
  • ಥಾವರ್ ಚಂದ್ ಗೆಹ್ಲೋಟ್ ಉಜ್ಜೈನಿಯ ವಿಕ್ರಂ ವಿಶ್ವವಿದ್ಯಾಲಯದಿಂದ ಬಿಎ ಪದವಿ ಪಡೆದಿದ್ದಾರೆ. ಡಾ.ಬಿ.ಆರ್.ಅಂಬೇಡ್ಕರ್ ಸಾಮಾಜಿಕ ವಿಜ್ಞಾನಗಳ ವಿಶ್ವವಿದ್ಯಾಲಯ ಅವರಿಗೆ ಗೌರವ ಡಾಕ್ಟರೇಟ್ ನೀಡಿದೆ.
  • ಕಾರ್ಮಿಕರ ಸಮಸ್ಯೆಗಳ ಕುರಿತು ಹಲವು ಹೋರಾಟಗಳನ್ನು ಮಾಡಿರುವ ಥಾವರ್ ಚಂದ್ ಗೆಹ್ಲೋಟ್ ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಜೈಲು ವಾಸ ಅನುಭವಿಸಿದ್ದಾರೆ. ಬಿಜೆಪಿ ಸೇರಿದ ಮೇಲೆ ಪಕ್ಷದ ವಿವಿಧ ಹುದ್ದೆಗಳಲ್ಲಿಯೂ ಕಾರ್ಯ ನಿರ್ವಹಣೆ ಮಾಡಿದ್ದಾರೆ.
  • 1977-1980ರ ತನಕ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮತ್ತು ಉಪಾಧ್ಯಕ್ಷರಾಗಿ ಕೆಲಸ ಮಾಡಿದ್ದಾರೆ. 1985ರಲ್ಲಿ ಬಿಜೆಪಿ ಯುವ ಮೋರ್ಚಾ ಉಪಾಧ್ಯಕ್ಷರಾಗಿದ್ದರು. ಮಧ್ಯ ಪ್ರದೇಶದ ವಿಧಾನಸಭೆಗೆ ಅವರು 1980, 1990, 1993ರಲ್ಲಿ ಶಾಸಕರಾಗಿ ಆಯ್ಕೆಯಾಗಿದ್ದರು. 1986-1987ರ ತನಕ ಮಧ್ಯ ಪ್ರದೇಶ ಬಿಜೆಪಿ ಅಧ್ಯಕ್ಷರಾಗಿದ್ದರು.
  • 1996-2009ರ ತನಕ ಮಧ್ಯ ಪ್ರದೇಶದ ಶಾಜಾಪುರ ಕ್ಷೇತ್ರದಿಂದ ಸಂಸದರಾಗಿ ಲೋಕಸಭೆ ಪ್ರವೇಶ ಮಾಡಿದರು. 2028ರಲ್ಲಿ ಶಾಜಾಪುರ ಕ್ಷೇತ್ರ ರದ್ದುಗೊಂಡು ದೇವಾಸ್ ಕ್ಷೇತ್ರ ರಚನೆಗೊಂಡಿತು. 2009ರಲ್ಲಿ ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ಸೋಲು ಕಂಡರು.
  • 2012ರಲ್ಲಿ ಥಾವರ್ ಚಂದ್ ಗೆಹ್ಲೋಟ್ ರಾಜ್ಯಸಭೆ ಸದಸ್ಯರಾಗಿ ಆಯ್ಕೆಯಾದರು. 2018ರಲ್ಲಿ ಮಧ್ಯ ಪ್ರದೇಶದಿಂದ ಅವನ್ನು ಮರು ಆಯ್ಕೆ ಮಾಡಲಾಯಿತು. 2014ರಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬಂದಾಗ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ಸಚಿವರಾಗಿದ್ದರು.
  • ಪ್ರಧಾನಿ ನರೇಂದ್ರ ಮೋದಿ ಆಪ್ತ ವಲಯದ ನಾಯಕರಲ್ಲಿ ಥಾವರ್ ಚಂದ್ ಗೆಹ್ಲೋಟ್ ಸಹ ಒಬ್ಬರು. ಗುಜರಾತ್ ಬಿಜೆಪಿ ವೀಕ್ಷಕರಾಗಿ. ದೆಹಲಿ ಮತ್ತು ಕರ್ನಾಟಕ ಬಿಜೆಪಿ ಉಸ್ತುವಾರಿಯಾಗಿ ಅವರು ಕಾರ್ಯ ನಿರ್ವಹಣೆ ಮಾಡಿದ್ದಾರೆ. 

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

Most Popular