ಬಳ್ಳಾರಿ : ಮೀನುಗಾರಿಕೆ ಇಲಾಖೆ ವತಿಯಿಂದ 2025-26ನೇ ಸಾಲಿಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೀನುಗಾರರಿಗೆ ಉಚಿತ ಮೀನುಗಾರಿಕೆ ಸಲಕರಣೆಗಳ ಕಿಟ್ ವಿತರಿಸಲು ಉದ್ದೇಶಿಸಲಾಗಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಅಗತ್ಯ ದಾಖಲೆಗಳೊಂದಿಗೆ ಆನ್ ಲೈನ್ ವೆಬ್ ಸೈಟ್ https://ballari.nic.in ಅಥವಾ ಬಳ್ಳಾರಿ, ಸಂಡೂರು ತಾಲ್ಲೂಕಿನ ಮೀನುಗಾರಿಕೆ ಇಲಾಖೆಯ ಕಚೇರಿಯ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಜ.31 ಕೊನೆಯ ದಿನ.
ಹೆಚ್ಚಿನ ಮಾಹಿತಿಗಾಗಿ ಮೀನುಗಾರಿಕೆ ಇಲಾಖೆಯ ಉಪನಿರ್ದೇಶಕರ ಕಚೇರಿ ಅಥವಾ ಬಳ್ಳಾರಿ, ಸಂಡೂರು ತಾಲ್ಲೂಕು ಸಹಾಯಕ ನಿರ್ದೇಶಕರ ಕಚೇರಿಗೆ ಭೇಟಿ ನೀಡಬಹುದು ಎಂದು ಮೀನುಗಾರಿಕೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜ.24 ರಂದು ವಿದ್ಯುತ್ ವ್ಯತ್ಯಯ
ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-2 ರ ವ್ಯಾಪ್ತಿಯಲ್ಲಿ 110/11ಕೆ.ವಿ ಜಿಲ್ಲಾ ಕೋರ್ಟ್ ಲೈನುಗಳ ನಿರ್ವಹಣೆ ಕಾರ್ಯ ಕೈಗೊಳ್ಳುತ್ತಿರುವುರಿಂದ ಜ.24 ರಂದು ಬೆಳಿಗ್ಗೆ 09 ರಿಂದ ಸಂಜೆ 06 ಗಂಟೆಯವರೆಗೆ ಎಫ್-6 ರ ವ್ಯಾಪ್ತಿಯ ತಾಳೂರು ರೋಡ್, ಸ್ನೇಹ ಕಾಲೋನಿ, ಶ್ರೀನಗರ, ರೇಣುಕಾ ನಗರ, ಭಗತ್ಸಿಂಗ್ ನಗರ, ಕನ್ನಡ ನಗರ, ಮಹಾನಂದಿ ಕೊಟ್ಟಂ, ಪಾರ್ವತಿ ನಗರ, ಎಸ್.ಪಿ.ಸರ್ಕಲ್, ಶಾಸ್ತ್ರೀ ನಗರ, ಬ್ಯಾಂಕ್ ಕಾಲೋನಿ, ಬಸವನಕುಂಟೆ, ಸಿರುಗುಪ್ಪ ರೋಡ್, ರಾಮ ನಗರ, ಅವಂಬಾವಿ, ಜಿಲ್ಲಾ ಕೋರ್ಟ್ ಸಂಕೀರ್ಣ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಹಾಗಾಗಿ ಸಾರ್ವಜನಿಕರು ಮತ್ತು ವಿದ್ಯುತ್ ಗ್ರಾಹಕರು ಸಹಕರಿಸಬೇಕು ಎಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

