HomeLive NewsBIG NEWS: ಗವರ್ನರ್ ಹಠಾವೋ…ಕರ್ನಾಟಕ ಬಚಾವೋ…: ವಿಧಾನಸೌಧದಲ್ಲಿ ಶಾಸಕ ಪ್ರದೀಪ್ ಈಶ್ವರ್ ಘೋಷಣೆ

BIG NEWS: ಗವರ್ನರ್ ಹಠಾವೋ…ಕರ್ನಾಟಕ ಬಚಾವೋ…: ವಿಧಾನಸೌಧದಲ್ಲಿ ಶಾಸಕ ಪ್ರದೀಪ್ ಈಶ್ವರ್ ಘೋಷಣೆ

ಬೆಂಗಳೂರು: ನರೇಗಾ ಯೋಜನೆ ಹೆಸರು ಬದಲಾವಣೆ ಮಾಡಿರುವ ಕೇಂದ್ರ ಸರ್ಕಾರದ ಕ್ರಮಕ್ಕೆ ಆಕ್ಷೇಪಿಸಿ ರಾಜ್ಯ ಕಾಂಗ್ರೆಸ್ ಸರ್ಕಾರ ಕರೆದಿರುವ ರಾಜ್ಯ ವಿಧಾನಮಂಡಲ ವಿಶೇಷ ಅಧಿವೇಶನದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರ ಬರೆದುಕೊಟ್ಟ ಭಾಷಣ ಓದದೇ ತೆರಳಿದ್ದು, ಭಾರಿ ಚರ್ಚೆಗೆ ಗ್ರಾಸವಾಗಿದೆ. ರಾಜ್ಯಪಾಲರ ನಡೆಗೆ ಆಡಳಿತ ಪಕ್ಷ ಕಾಂಗ್ರೆಸ್ ಸದಸ್ಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಧಿವೇಶನಕ್ಕೆ ಆಗಮಿಸಿದ್ದ ರಾಜ್ಯಪಾಲ ಥಾವರ್ ಚಂದ್ ಗೆ ಗೆಹ್ಲೋಟ್, ಜಂಟಿ ಸದನ ಉದ್ದೇಶಿಸಿ ಸರ್ಕಾರ ಬರೆದುಕೊಟ್ಟ ಭಾಷಣ ಓದಬೇಕಿತ್ತು. ಆದರೆ ರಾಜ್ಯಪಾಲರು ಭಾಷಣ ಓದದೇ ಕೇವಲ ಮೂರು ವಾಕ್ಯಗಳಲ್ಲಿ ಭಾಷಣ ಮುಗಿಸಿ ಸದನದಿಂದ ನಿರ್ಗಮಿಸಿದ್ದಾರೆ. ರಾಜ್ಯಪಾಲರ ಈ ನಡೆಗೆ ಕಾಂಗ್ರೆಸ್ ಸದಸ್ಯರು ಸದನದಲ್ಲಿಯೇ ದಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಂತೆ ನಡೆದುಕೊಳ್ಳುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್, ಸರ್ಕಾರ ಬರೆದುಕೊಟ್ಟ ಭಾಷಣವನ್ನು ರಾಜ್ಯಪಾಲರು ಅಧಿವೇಶನದಲ್ಲಿ ಓದಬೇಕಾಗಿದ್ದು, ಅವರ ಕರ್ತವ್ಯ. ಆದರೆ ರಾಜ್ಯಪಾಲರು ಭಾಷಣ ಓದದೇ ತೆರಳುವ ಮೂಲಕ ಸಂವಿಧಾನಕ್ಕೆ ಅವಮಾನ ಮಾಡಿದ್ದಾರೆ. ಕರ್ನಾಟಕ ವಿಧಾನಸಭೆಗೆ ಅವಮಾನ ಮಾಡಿದ್ದಾರೆ. ರಾಜ್ಯಪಾಲರು ಸರ್ಕಾರ ಬರೆದ ಭಾಷಣ ಒದದೇ ಕೇಂದ್ರದ ಎನ್ ಡಿಎ ಸರ್ಕಾರದ ಭಾಷಣದ ಸಾಲು ಓದಿ ಹೋಗಿದ್ದಾರೆ. ರಾಜ್ಯಪಾಲರ ನಡೆ ಖಂಡನೀಯ ಎಂದು ಕಿಡಿಕಾರಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜ್ಯಪಾಲರನ್ನು ತಡೆಯಲು ಕಾಂಗ್ರೆಸ್ ಸದಸ್ಯರು ಯತ್ನಿಸಿದೆವು, ಭಾಷಣ ಓದಿ ಹೋಗಿ ಎಂದು ಮನವಿ ಮಾಡಿದರೂ ರಾಜ್ಯಪಾಲರು ನಮ್ಮ ಮನವಿ ಆಲಿಸಿಲ್ಲ. ರಾಜ್ಯಪಾಲರನ್ನು ತಡೆಯಲು ಹೋದಾಗ ಬಿಜೆಪಿ ಸದಸ್ಯರು ನಮ್ಮ ಮೇಲೆ ಗೂಂಡಾಗಳಂತೆ ವರ್ತಿಸಿದ್ದಾರೆ. ಈ ವೇಳೆ ಬಿ.ಕೆ.ಹರಿಪ್ರಸಾದ್ ಅವರ ಬಟ್ಟೆ ಹರಿದು ಹಾಕಿದ್ದಾರೆ. ಇದನ್ನು ನಾವು ಖಂಡಿಸುತ್ತೇವೆ. ಕೇಂದ್ರ ಎನ್ ಡಿಎ ಸರ್ಕಾರದ ಪರ ಇರುವಂತಹ ರಾಜ್ಯಪಾಲರು ನಮಗೆ ಬೇಕಿಲ್ಲ. ಗವರ್ನರ್ ಹಠಾವೋ…ಕರ್ನಾಟಕ ಬಚಾವೋ… ಎಂದು ಘೋಷಣೆ ಕೂಗಿದರು. ರಾಜ್ಯಪಾಲರ ಈ ನಡೆ ಸರಿಯಲ್ಲ ಶೇಮ್ ಶೇಮ್ ಗವರ್ನರ್ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular