ಬೆಂಗಳೂರು: ಅಲೆಮಾರಿ ಮತ್ತು ಅರೆ ಅಲೆಮಾರಿ ಸಮಾಜದ ಜನರಿಗೆ ಮನೆ ನಿರ್ಮಾಣಕ್ಕೆ ಸಹಾಯ ಹಸ್ತ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ವಿಧಾನಸೌಧದಲ್ಲಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತಾಗಿ ನಿರ್ಧಾರ ಕೈಗೊಳ್ಳಲಾಗಿದೆ. 100 ಕೋಟಿ ರೂಪಾಯಿ ಮೊತ್ತದಲ್ಲಿ 1200 ಚದರ ಅಡಿ ವಿಸ್ತೀರ್ಣದ ನಿವೇಶನದಲ್ಲಿ 600 ಚದರ ಅಡಿಗಳ ವಿಸ್ತೀರ್ಣದ ಮನೆಗಳ ನಿರ್ಮಾಣಕ್ಕೆ ಸಚಿವ ಸಂಪುಟ ಒಪ್ಪಿಗೆ ನೀಡಿದೆ.
ಈ ಮೂಲಕ ರಾಜ್ಯ ಸರ್ಕಾರ ಅಲೆಮಾರಿ, ಅರೆ ಅಲೆಮಾರಿ ಸಮುದಾಯಕ್ಕೆ ಸಿಹಿ ಸುದ್ದಿ ನೀಡಿದೆ.
22 ಹಿಂದುಳಿದ, ದಲಿತ ಮಠಗಳಿಗೆ ಜಾಗ ಮಂಜೂರು ಮಾಡಲು ಸಂಪುಟ ಸಭೆ ಒಪ್ಪಿಗೆ ನೀಡಿದೆ. ಬೆಂಗಳೂರು ಉತ್ತರ ತಾಲೂಕಿನ ದಾಸನಪುರ ಹೋಬಳಿಯಲ್ಲಿ ಜಾಗ ಮಂಜೂರು ಮಾಡಲು ತೀರ್ಮಾನ ಕೈಗೊಳ್ಳಲಾಗಿದೆ. ರಾವುತನಹಳ್ಳಿ ಗ್ರಾಮದ ಸರ್ವೆ ನಂಬರ್ 57, 58 ರಲ್ಲಿರುವ ಸರ್ಕಾರಿ ಜಮೀನಿನಲ್ಲಿ 22 ಹಿಂದುಳಿದ, ದಲಿತ ಮಠಗಳಿಗೆ ಜಾಗ ನೀಡಲಾಗುವುದು.

