ಬೆಂಗಳೂರು: ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಮುಂದಾದ ಪುನೀತ್ ಕೆರೆಹಳ್ಳಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಾಗಲಗುಂಟೆ ಪೊಲೀಸರು ಬಂಧಿಸಿದ್ದಾರೆ.
ಕೆಂಪಾಪುರದಲ್ಲಿ ಆಕ್ರಮ ಬಾಂಗ್ಲಾ ವಲಸಿಗರಿದ್ದಾರೆ ಎಂಬ ಆರೋಪ ಹಿನ್ನೆಲೆಯಲ್ಲಿ ಸೋಲದೇವನಹಳ್ಳಿ ಠಾಣಾ ವ್ಯಾಪ್ತಿಯ ಕೆಂಪಾಪುರಕ್ಕೆ ಪುನೀತ್ ಹೋಗಿದ್ದು, ಬಾಂಗ್ಲಾ ವಲಸಿಗ ಹಸನ್ ಎಂಬಾತನನ್ನು ಪತ್ತೆ ಹಚ್ಚಿದ್ದಾರೆ. ಈ ಹಿನ್ನೆಲೆ ಪುನೀತ್ ಕೆರೆಹಳ್ಳಿಯನ್ನು ಪೊಲೀಸರು ಠಾಣೆಗೆ ಕರೆತಂದಿದ್ದಾರೆ.
ಸೋಲದೇವನಹಳ್ಳಿ ಪೊಲೀಸ್ ಠಾಣೆಗೆ ಬಂದು ಪುನೀತ್ ದೂರು ನೀಡಿ ಹೊರ ಬರುತ್ತಿದ್ದಂತೆ ಬಾಗಲಗುಂಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ. ಈ ಹಿಂದೆ ಅಕ್ರಮ ಗೋ ಸಾಗಾಣೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ನೋಟಿಸ್ ನೀಡಿದರೂ ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಬಂಧಿಸಲಾಗಿದೆ.

