HomeLatest NewsBREAKING: ಹುಬ್ಬಳ್ಳಿ 4 ಅಂತಸ್ತಿನ ಕಮರ್ಷಿಯಲ್ ಕಟ್ಟಡದಲ್ಲಿ ಭಾರಿ ಅಗ್ನಿ ಅವಘಡ: ಸ್ಥಳೀಯರ ಸಮಯಪ್ರಜ್ಞೆಯಿಂದ ವೃದ್ಧ...

BREAKING: ಹುಬ್ಬಳ್ಳಿ 4 ಅಂತಸ್ತಿನ ಕಮರ್ಷಿಯಲ್ ಕಟ್ಟಡದಲ್ಲಿ ಭಾರಿ ಅಗ್ನಿ ಅವಘಡ: ಸ್ಥಳೀಯರ ಸಮಯಪ್ರಜ್ಞೆಯಿಂದ ವೃದ್ಧ ದಂಪತಿ ಪಾರು

ಹುಬ್ಬಳ್ಳಿ: ಹುಬ್ಬಳ್ಳಿಯ 4 ಅಂತಸ್ತಿನ ಕಮರ್ಷಿಯಲ್ ಕಟ್ಟಡದಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಮರಾಠ ಗಲ್ಲಿಯಲ್ಲಿರುವ ಸುಖಸಾಗರ ಕಟ್ಟಡದಲ್ಲಿ ಘಟನೆ ನಡೆದಿದೆ.

ಮೊದಲ ಹಾಗೂ ಎರಡನೇ ಮಹಡಿಯಲ್ಲಿದ್ದ ಬಟ್ಟೆ ಅಂಗಡಿ ಸಂಪೂರ್ಣವಾಗಿ ಸುಟ್ಟು ಹೋಗಿದೆ. ಬೆಂಕಿಯಿಂದ ಅಪಾರ ಮೌಲ್ಯದ ಚಪ್ಪಲಿ, ಬಟ್ಟೆಗಳು ಸುಟ್ಟು ಕರಕಲಾಗಿವೆ. ಬೆಂಕಿ ಹೊತ್ತಿಕೊಂಡ ಕಟ್ಟಡದಲ್ಲಿ ಸಿಲುಕಿಕೊಂಡಿದ್ದ ವೃದ್ಧ ದಂಪತಿಯನ್ನು ರಕ್ಷಣೆ ಮಾಡಲಾಗಿದೆ. ಸ್ಥಳೀಯರ ಸಮಯಪ್ರಜ್ಞೆಯಿಂದ ವೃದ್ಧ ದಂಪತಿ ಪಾರಾಗಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ರಾತ್ರಿ 12.30ರ ಸುಮಾರಿಗೆ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ನೋಡ ನೋಡುತ್ತಿದ್ದಂತೆ ಕಟ್ಟಡಕ್ಕೆ ಬೆಂಕಿಯ ಕೆನ್ನಾಲಿಗೆ ಹರಡಿದೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಹುಬ್ಬಳ್ಳಿಯ ಶಹರಾ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular