ಬೆಂಗಳೂರು : ರಾಜ್ಯದಲ್ಲಿ ಸರ್ಕಾರ ಬೈಕ್ ಟ್ಯಾಕ್ಸಿಗಳಿಗೆ ಲೈಸೆನ್ಸ್ ನಿರಾಕರಿಸುವಂತಿಲ್ಲ ಎಂದು ಹೈಕೋರ್ಟ್ ತೀರ್ಪು ನೀಡಿದೆ.ಹೌದು. ಕರ್ನಾಟಕದಲ್ಲಿ ಬೈಕ್ ಟ್ಯಾಕ್ಸಿ ಸೇವೆಗಳ ಮೇಲಿದ್ದ ನಿಷೇಧವನ್ನು ರಾಜ್ಯ ಹೈಕೋರ್ಟ್ ರದ್ದುಗೊಳಿಸಿದೆ.
ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಮತ್ತು ನ್ಯಾಯಮೂರ್ತಿ ಸಿ.ಎಂ. ಜೋಶಿ ಅವರಿದ್ದ ವಿಭಾಗೀಯ ಪೀಠವು ಈ ಪ್ರಕರಣವನ್ನು ವಿಚಾರಣೆ ನಡೆಸಿ ಆದೇಶ ನೀಡಿದೆ.ಈ ಹಿಂದೆ ಏಕಸದಸ್ಯ ಪೀಠವು ಬೈಕ್ ಟ್ಯಾಕ್ಸಿ ಸೇವೆಯನ್ನು ಅಕ್ರಮ ಎಂದು ಘೋಷಿಸಿ ನಿಷೇಧಿಸಿತ್ತು. ಇದರ ವಿರುದ್ಧ ರ್ಯಾಪಿಡೋ, ಉಬರ್ ಮತ್ತು ಓಲಾ ಸೇರಿದಂತಹ ಕಂಪನಿಗಳು ಹೈಕೋರ್ಟ್‘ಗೆ ಅರ್ಜಿ ಸಲ್ಲಿಸಿದ್ದವು. ವಿಚಾರಣೆಯ ನಂತರ ವಿಭಾಗೀಯ ಪೀಠವು ಸರ್ಕಾರದ ನಿಷೇಧ ಆದೇಶವನ್ನು ತೆರವುಗೊಳಿಸಿದೆ.
ಬೈಕ್ ಟ್ಯಾಕ್ಸಿ ಸಂಸ್ಥೆಗಳ ಮೇಲ್ಮನವಿ ಪುರಸ್ಕರಿಸಿದ ಹೈಕೋರ್ಟ್ ಸರ್ಕಾರ ಬೈಕ್ ಟ್ಯಾಕ್ಸಿಗಳಿಗೆ ಲೈಸೆನ್ಸ್ ನಿರಾಕರಿಸುವಂತಿಲ್ಲಎಂದು ಹೈಕೋರ್ಟ್ ವಿಭಾಗೀಯ ಪೀಠ ತೀರ್ಪು ನೀಡಿದೆ. ಈ ಮೂಲಕ ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಸಂಚಾರ ಎಂದಿನಂತೆ ಮುಂದುವರೆಯಲಿದೆ.
ಬೈಕ್ ಟ್ಯಾಕ್ಸಿ ಎಂದರೆ ಸ್ಮಾರ್ಟ್ ಫೋನ್ ಅಪ್ಗಳ (ಉದಾ. Rapido, Uber Moto) ಮೂಲಕ ಆ್ಯಪ್ ಆಧಾರಿತ ಸೇವೆ, ಇದರಲ್ಲಿ ಬೈಕ್ಗಳನ್ನು ಪ್ರಯಾಣಿಕರನ್ನು ಕರೆದೊಯ್ಯಲು ಬಳಸಲಾಗುತ್ತದೆ.

