HomeLatest Newsಬೈಕ್ ಕಳವಿಗೆ ಯತ್ನಿಸಿದ ಇಬ್ಬರನ್ನು ಥಳಿಸಿ ಪೊಲೀಸರಿಗೊಪ್ಪಿಸಿದ ಜನ

ಬೈಕ್ ಕಳವಿಗೆ ಯತ್ನಿಸಿದ ಇಬ್ಬರನ್ನು ಥಳಿಸಿ ಪೊಲೀಸರಿಗೊಪ್ಪಿಸಿದ ಜನ

ಬೆಳ್ತಂಗಡಿ: ಬೈಕ್ ಕಳವು ಮಾಡಿ ಪರಾರಿಯಾಗಲು ಯತ್ನಿಸಿದ ಆರೋಪದ ಮೇಲೆ ಇಬ್ಬರು ಆರೋಪಿಗಳನ್ನು ಹಿಡಿದು ಸಾರ್ವಜನಿಕರು ಥಳಿಸಿದ್ದಾರೆ. ನಂತರ ವೇಣೂರು ಪೊಲೀಸರಿಗೆ ಅವರನ್ನು ಒಪ್ಪಿಸಿದ್ದಾರೆ.

ಬೈಕ್ ಕಳ್ಳತನಕ್ಕೆ ಯತ್ನಿಸಿದ ಬಗ್ಗೆ ಪ್ರಕರಣ ದಾಖಲಿಸಲಾಗಿದೆ. ಹಲ್ಲೆಗೆ ಒಳಗಾದವರು ಪ್ರತಿ ದೂರು ನೀಡಿದ್ದು, ಎಂಟು ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಪೊಲೀಸರು ಎರಡೂ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಬೆಳ್ತಂಗಡಿಯ ಮರೋಡಿ ಗ್ರಾಮದ ಪಳಾರಗೋಳಿ ಬಳಿ ಜನವರಿ 20ರಂದು ತಡರಾತ್ರಿ ಕೂಳೂರು ನಿವಾಸಿಗಳಾದ ಮೈದುನ್ ನಾಸಿರ್ ಮತ್ತು ಅಬ್ದುಲ್ ಸಮದ್ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಬಗ್ಗೆ ನೇಮೋತ್ಸವದಲ್ಲಿದ್ದ ದೇವಿಪ್ರಸಾದ್ ಮತ್ತು ಇತರರಿಗೆ ಕರೆ ಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅವರು ಮನೆಯ ಬಳಿ ಬಂದಾಗ ಆರೋಪಿಗಳು ಬೈಕ್ ಕಳವು ಮಾಡಿಕೊಂಡು ಹೋಗುವುದನ್ನು ಕಂಡು ಬೆನ್ನಟ್ಟಿ ತಡೆದು ನಿಲ್ಲಿಸಿದ್ದಾರೆ. ಇಬ್ಬರನ್ನು ಥಕಳಿಸಿ ಮರಕ್ಕೆ ಕಟ್ಟಿ ಹಾಕಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಸಂಬಂಧಿಕರ ಮನೆಗೆ ಬಂದು ದಾರಿತಪ್ಪಿ ಬೈಕ್ ತೆಗೆದುಕೊಂಡು ಹೋಗುವ ವೇಳೆ ಘಟನೆ ನಡೆದಿದೆ. ಹಲವರು ಹಲ್ಲೆ ಮಾಡಿದ್ದಾರೆ ಎಂದು ಆರೋಪಿತರು ಕೂಡ ದೂರು ನೀಡಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular