ನವದೆಹಲಿ: 18ನೇ ರೋಜ್ಗಾರ್ ಮೇಳದಲ್ಲಿ ಹೊಸದಾಗಿ ನೇಮಕಗೊಂಡ ಯುವಕರಿಗೆ 61 ಸಾವಿರಕ್ಕೂ ಹೆಚ್ಚು ನೇಮಕಾತಿ ಪತ್ರಗಳನ್ನು ಪ್ರಧಾನಿ ಮೋದಿ ವಿತರಿಸಲಿದ್ದಾರೆ.
18ನೇ ರೋಜ್ಗಾರ್ ಮೇಳದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ ವಿಡಿಯೋ ಕಾನ್ಫರೆನ್ಸ್ ಮೂಲಕ ವಿವಿಧ ಸರ್ಕಾರಿ ಇಲಾಖೆಗಳು ಮತ್ತು ಸಂಸ್ಥೆಗಳಲ್ಲಿ ಹೊಸದಾಗಿ ನೇಮಕಗೊಂಡ ಯುವಕರಿಗೆ 61 ಸಾವಿರಕ್ಕೂ ಹೆಚ್ಚು ನೇಮಕಾತಿ ಪತ್ರಗಳನ್ನು ವಿತರಿಸಲಿದ್ದಾರೆ. ಈ ಸಂದರ್ಭದಲ್ಲಿ ಅವರು ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ.
18ನೇ ರೋಜ್ಗಾರ್ ಮೇಳವನ್ನು ದೇಶಾದ್ಯಂತ 45 ಸ್ಥಳಗಳಲ್ಲಿ ಆಯೋಜಿಸಲಾಗುವುದು. ಹೊಸದಾಗಿ ನೇಮಕಗೊಂಡ ಅಭ್ಯರ್ಥಿಗಳು ಗೃಹ ಸಚಿವಾಲಯ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಹಣಕಾಸು ಸೇವೆಗಳ ಇಲಾಖೆ ಮತ್ತು ಉನ್ನತ ಶಿಕ್ಷಣ ಇಲಾಖೆ ಸೇರಿದಂತೆ ವಿವಿಧ ಸಚಿವಾಲಯಗಳು ಮತ್ತು ಇಲಾಖೆಗಳಿಗೆ ಸೇರಲಿದ್ದಾರೆ.
ರೋಜ್ಗಾರ್ ಮೇಳವು ಉದ್ಯೋಗ ಸೃಷ್ಟಿಯ ಗುರಿಯನ್ನು ಹೊಂದಿರುವ ಪ್ರಮುಖ ಸರ್ಕಾರಿ ಉಪಕ್ರಮವಾಗಿದೆ. ಪ್ರಾರಂಭವಾದಾಗಿನಿಂದ, ದೇಶಾದ್ಯಂತ ಆಯೋಜಿಸಲಾದ ರೋಜ್ಗಾರ್ ಮೇಳಗಳ ಮೂಲಕ 11 ಲಕ್ಷಕ್ಕೂ ಹೆಚ್ಚು ನೇಮಕಾತಿ ಪತ್ರಗಳನ್ನು ನೀಡಲಾಗಿದೆ.

