HomeLatest Newsಕರ್ತವ್ಯಕ್ಕೆ ಅಡ್ಡಿ ಆರೋಪ ರಾಜ್ಯಾದ್ಯಂತ ಕೆಆರ್‌ಎಸ್‌ ಪಕ್ಷದ ಮುಖಂಡರ ವಿರುದ್ಧ ಎಫ್ಐಆರ್ ಗೆ ಸೂಚನೆ

ಕರ್ತವ್ಯಕ್ಕೆ ಅಡ್ಡಿ ಆರೋಪ ರಾಜ್ಯಾದ್ಯಂತ ಕೆಆರ್‌ಎಸ್‌ ಪಕ್ಷದ ಮುಖಂಡರ ವಿರುದ್ಧ ಎಫ್ಐಆರ್ ಗೆ ಸೂಚನೆ

ಬೆಂಗಳೂರು: ಸರ್ಕಾರಿ ಕಚೇರಿಗಳಲ್ಲಿ ಅಧಿಕಾರಿಗಳು, ನೌಕರರು, ಸಿಬ್ಬಂದಿ ಕೆಲಸಕ್ಕೆ ಅಡ್ಡಿಪಡಿಸುವ ಕೆಆರ್‌ಎಸ್‌ ಪಕ್ಷದ ಕಾರ್ಯಕರ್ತರು, ಮುಖಂಡರ ವಿರುದ್ಧ ರಾಜ್ಯಾದ್ಯಂತ ಎಫ್ಐಆರ್ ದಾಖಲಿಸುವಂತೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕರು ಸೂಚನೆ ನೀಡಿದ್ದಾರೆ.

ಸಾರ್ವಜನಿಕವಾಗಿ ಕರ್ತವ್ಯಕ್ಕೆ ಅಡ್ಡಿ ಸನ್ಮಾನದ ನೆಪದಲ್ಲಿ ಮಾನಹಾನಿ ಮಾಡುತ್ತಿರುವ ಘಟನೆಗಳು ನಡೆದಿವೆ. ಚನ್ನಪಟ್ಟಣದ ಇನ್ಸ್ಪೆಕ್ಟರ್ ಜೊತೆಗೆ ಕೆಆರ್‌ಎಸ್ ಪಕ್ಷದ ಕಾರ್ಯಕರ್ತರು ಇತ್ತೀಚೆಗೆ ಗಲಾಟೆ ಮಾಡಿದ್ದರು. ಏಕಮುಖ ಸಂಚಾರ ಮಾರ್ಗದಲ್ಲಿ ಬಸ್ ತಂದು ನಿಯಮ ಉಲ್ಲಂಘಿಸಿದ್ದರು. ಅಲ್ಲದೆ, ಅದನ್ನು ಪ್ರಶ್ನಿಸಿದ ಪೊಲೀಸರೊಂದಿಗೆ ಗಲಾಟೆ ಮಾಡಿದ್ದರು ಎಂಬ ಆರೋಪವಿದೆ.

ಈ ಕುರಿತಾಗಿ ಬೆಂಗಳೂರು ದಕ್ಷಿಣ ಜಿಲ್ಲಾ ಎಸ್.ಪಿ. ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಪತ್ರ ಬರೆದಿದ್ದರು. ಘಟನೆ ಆಧರಿಸಿ ರಾಜ್ಯದ ಪೊಲೀಸರಿಗೆ ಪೊಲೀಸ್ ಮಹಾ ನಿರ್ದೇಶಕರು ಸೂಚನೆ ನೀಡಿದ್ದಾರೆ. ಇದಕ್ಕೆ ಆಕ್ರೋಶ ವ್ಯಕ್ತಪಡಿಸಿರುವ ಕೆಆರ್‌ಎಸ್‌ ಪಕ್ಷದ ಮುಖಂಡರು ಭ್ರಷ್ಟ ಅಧಿಕಾರಿಗಳನ್ನು ಪ್ರಶ್ನೆ ಮಾಡಿದರೆ ಸರ್ಕಾರಿ ಕೆಲಸಕ್ಕೆ ಅಡ್ಡಿಯ ನೆಪ ಮಾಡಿ ಪ್ರಕರಣ ದಾಖಲಿಸಲು ಸೂಚನೆ ನೀಡಿರುವುದು ಯಾವ ನ್ಯಾಯ? ಹಾಗಾದರೆ ಭ್ರಷ್ಟಾಚಾರವನ್ನು ಪ್ರಶ್ನಿಸಬಾರದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular