ಶಾಲೆ, ಕಾಲೇಜು, ಅಂಗನವಾಡಿಗಳಲ್ಲಿ ಉಚಿತವಾಗಿ ಮಕ್ಕಳ ಆರೋಗ್ಯ ತಪಾಸಣೆ ಮಾಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ರಾಷ್ಟ್ರೀಯ ಬಾಲ ಸ್ವಾಸ್ಥ್ಯ (RBSK)ಕಾರ್ಯಕ್ರಮದಡಿಯಲ್ಲಿ 6 ವರ್ಷದೊಳಗಿನ ಅಂಗನವಾಡಿ ಕೇಂದ್ರಗಳಲ್ಲಿನ ಮಕ್ಕಳು ಹಾಗೂ ಸರ್ಕಾರಿ ಮತ್ತು ಸರ್ಕಾರಿ ಅನುದಾನಿತ ಶಾಲಾ-ಕಾಲೇಜುಗಳಲ್ಲಿ 1 ರಿಂದ 12ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಆರ್‌ಬಿಎಸ್‌ಕೆ ಮೊಬೈಲ್ ಹೆಲ್ತ್ ತಂಡಗಳ ಮುಖಾಂತರ ಉಚಿತವಾಗಿ ಆರೋಗ್ಯ ತಪಾಸಣೆಯನ್ನು ನಡೆಸಲಾಗಿದ್ದು, 2025-26ನೇ ಸಾಲಿಗೆ ಏಪ್ರಿಲ್ ನಿಂದ ಡಿಸೆಂಬರ್ ವರೆಗೆ ಒಟ್ಟು 52,02,647 ಹೆಣ್ಣು ಮಕ್ಕಳ ಆರೋಗ್ಯ ತಪಾಸಣೆಯನ್ನು ನಡೆಸಿದ್ದೇವೆ ಎಂದು ತಿಳಿಸಿದ್ದಾರೆ.

