HomeLatest Newsಪದವಿ, ಡಿಪ್ಲೋಮಾ ವ್ಯಾಸಂಗ ಮಾಡುತ್ತಿರುವ ಮಾಜಿ ಸೈನಿಕರ ಮಕ್ಕಳಿಗೆ ಗುಡ್ ನ್ಯೂಸ್: ಶಿಷ್ಯವೇತನ ಅರ್ಜಿ ಸಲ್ಲಿಕೆ...

ಪದವಿ, ಡಿಪ್ಲೋಮಾ ವ್ಯಾಸಂಗ ಮಾಡುತ್ತಿರುವ ಮಾಜಿ ಸೈನಿಕರ ಮಕ್ಕಳಿಗೆ ಗುಡ್ ನ್ಯೂಸ್: ಶಿಷ್ಯವೇತನ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಚಿತ್ರದುರ್ಗ: ಪ್ರಸಕ್ತ ಸಾಲಿನಲ್ಲಿ ಒಂದನೇ ತರಗತಿಯಿಂದ ಅಂತಿಮ ವರ್ಷದ ಪದವಿ, ಡಿಪ್ಲೋಮಾ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಕರ್ನಾಟಕ ಮೂಲ ನಿವಾಸಿ ಮಾಜಿ ಸೈನಿಕರ ಮಕ್ಕಳ ಶಿಷ್ಯವೇತನಕ್ಕಾಗಿ ಅರ್ಜಿ ಸಲ್ಲಿಕೆ ಅವಧಿಯನ್ನು ಜನವರಿ 31 ರವರಗೆ ವಿಸ್ತರಿಸಲಾಗಿದೆ.

ಕೇಂದ್ರಿಯ ಸೈನಿಕ ಮಂಡಳಿ ಮತ್ತು ಇತರೆ ಸರ್ಕಾರಿ ಮೂಲಗಳಿಂದ ಯಾವುದೇ ಶಿಷ್ಯವೇತನವನ್ನು ಪಡೆಯದಿರುವ ಮಾಜಿ ಸೈನಿಕರ ಮಕ್ಕಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.

ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಶಿವಮೊಗ್ಗ ಕಚೇರಿಯಲ್ಲಿ ಶುಲ್ಕ ರಹಿತ ಅರ್ಜಿಗಳನ್ನು ವಿತರಿಸಲಾಗುತ್ತಿದ್ದು, ಭರ್ತಿ ಮಾಡಿದ ಅರ್ಜಿಗಳನ್ನು ಜ.31 ರೊಳಗಾಗಿ ಉಪನಿರ್ದೇಶಕರು, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಶಿವಮೊಗ್ಗ ಕಚೇರಿಗೆ ಸಲ್ಲಿಸಲು ಕೋರಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08182-220925 ಗೆ ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಉಪನಿರ್ದೇಶಕ ಡಾ.ಸಿ.ಎ.ಹಿರೇಮಠ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular