ಗರ್ಭಕಂಠದ ಕಾನ್ಸರ್ ವಿರುದ್ಧ ಆರೋಗ್ಯ ಇಲಾಖೆ ಸಮರೋಪಾದಿಯಲ್ಲಿ ಕೆಲಸ ಮಾಡುತ್ತಿದೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ತಿಳಿಸಿದ್ದಾರೆ.
ಕಲ್ಯಾಣ ಕರ್ನಾಟಕ ಮತ್ತು ಸುತ್ತಮುತ್ತಲ ಭಾಗದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಓದುತ್ತಿರುವ ಒಂದು ಲಕ್ಷಕ್ಕೂ ಅಧಿಕ 14 ವರ್ಷದ ಹೆಣ್ಣುಮಕ್ಕಳಿಗೆ HPV ಲಸಿಕೆ ನೀಡಲಾಗುತ್ತದೆ. ಈ ಯೋಜನೆಯನ್ನು ಸದ್ಯದಲ್ಲೇ ರಾಜ್ಯಾದ್ಯಂತ ವಿಸ್ತರಿಸಲಾಗುವುದು. ಗರ್ಭಕಂಠ ಕಾನ್ಸರ್ ನಿರ್ಮೂಲನೆ ಮಾಡುವುದು ನಮ್ಮ ಆದ್ಯತೆಯ ಕಾರ್ಯಕ್ರಮಗಳಲ್ಲೊಂದಾಗಿದೆ ಎಂದು ಅವರು ತಿಳಿಸಿದ್ದಾರೆ.

