HomeLatest NewsGOOD NEWS : ರಾಜ್ಯದ ʼSSLCʼ ಟಾಪರ್‌ ಗಳಿಗೆ ಭರ್ಜರಿ ಗುಡ್‌ ನ್ಯೂಸ್‌ :...

GOOD NEWS : ರಾಜ್ಯದ ʼSSLCʼ ಟಾಪರ್‌ ಗಳಿಗೆ ಭರ್ಜರಿ ಗುಡ್‌ ನ್ಯೂಸ್‌ :  ಲ್ಯಾಪ್‌ʼಟಾಪ್‌ ಬದಲು 50,000 ನಗದು ಬಹುಮಾನ.!

ಬೆಂಗಳೂರು : ರಾಜ್ಯ ಸರ್ಕಾರ ಎಸ್‌ ಎಸ್‌ ಎಲ್‌ ಸಿ (SSLC) ಟಾಪರ್‌ ಗಳಿಗೆ ಭರ್ಜರಿ ಗುಡ್‌ ನ್ಯೂಸ್‌ ನೀಡಿದೆ. ಹೌದು, ಇನ್ಮುಂದೆ ಎಸ್‌ ಎಸ್‌ ಎಲ್‌ ಸಿ ಟಾಪರ್‌ ಗಳಿಗೆ ಲ್ಯಾಪ್‌ ಟಾಪ್‌ ನೀಡುವ ಬದಲು ನಗದು ಬಹುಮಾನ ನೀಡಲು ನಿರ್ಧರಿಸಿದೆ.

ಪ್ರತಿ ಜಿಲ್ಲೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಟಾಪ್‌ -೩ ವಿದ್ಯಾರ್ಥಿಗಳ ಆಧಾರ್‌ ಲಿಂಕ್‌ ಆದ ಖಾತೆಗೆ ನೇರ ಹಣ ವರ್ಗಾವಣೆ ಮಾಡಲು ಚಿಂತನೆ ನಡೆಸಲಾಗಿದೆ. ಪ್ರತಿ ವಿದ್ಯಾರ್ಥಿಗೆ 50,000 ರೂ ನಗದು ಜಮಾ ಆಗಲಿದೆ.

೨೦೨೪-೨೫ ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ರಾಜ್ಯದ ೭೫೮ ವಿದ್ಯಾರ್ಥಿಗಳು ನಗದು ಬಹುಮಾನಕ್ಕೆ ಆಯ್ಕೆ ಆಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಲ್ಯಾಪ್‌ ಟಾಪ್‌ ಬದಲು ಹಣ ನೀಡುವುದರಿಂದ ವಿದ್ಯಾರ್ಥಿಗಳಿಗೆ ಹೆಚ್ಚಿನ ಪ್ರಯೋಜನ ಸಿಗಲಿದೆ . ಹಣ ತಮ್ಮ ಮುಂದಿನ ಶಿಕ್ಷಣಕ್ಕೆ  ಸಹಕಾರಿಯಾಗುವ ನಿಟ್ಟಿನಲ್ಲಿ ಚಿಂತನೆ ನಡೆಸಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿದು ಬಂದಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular