HomeLatest NewsBREAKING : ಶಿಡ್ಲಘಟ್ಟ ಪೌರಾಯುಕ್ತೆಗೆ ಆಸಿಡ್‌ ಎರಚುವುದಾಗಿ ಬೆದರಿಕೆ, ರಕ್ಷಣೆಗಾಗಿ ಕೋರ್ಟ್‌ ಮೊರೆ..!

BREAKING : ಶಿಡ್ಲಘಟ್ಟ ಪೌರಾಯುಕ್ತೆಗೆ ಆಸಿಡ್‌ ಎರಚುವುದಾಗಿ ಬೆದರಿಕೆ, ರಕ್ಷಣೆಗಾಗಿ ಕೋರ್ಟ್‌ ಮೊರೆ..!

ಚಿಕ್ಕಬಳ್ಳಾಪುರ : ಶಿಡ್ಲಘಟ್ಟ  ಪೌರಾಯುಕ್ತೆ ಅಮೃತಾ ಗೌಡಗೆ ಇತ್ತೀಚೆಗೆ ಕಾಂಗ್ರೆಸ್‌ ಮುಖಂಡ ರಾಜೀವ್‌ ಗೌಡ ಕರೆ ಮಾಡಿ ಅಶ್ಲೀಲವಾಗಿ ನಿಂದಿಸಿ ಬೆದರಿಕೆಯೊಡ್ಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಪತ್ತೆಯಾಗಿರುವ ರಾಜೀವ್‌ ಗೌಡನಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

ಈ ಬೆನ್ನಲ್ಲೇ ಪೌರಾಯುಕ್ತೆಗೆ ಆಸಿಡ್‌ ಎರಚುವುದಾಗಿ ಅನಾಮಧೇಯ ಬೆದರಿಕೆ ಪತ್ರ ಬಂದಿದೆ. ಆಸಿಡ್‌ ಎರಚುವುದಾಗಿ ಬೆದರಿಕೆಯೊಡ್ಡಿ ಹಲವು  ಬೆದರಿಕೆ ಕರೆಗಳು ಬರುತ್ತಿದ್ದು, ರಕ್ಷಣೆಗಾಗಿ ಅವರು ಚಿಂತಾಮಣಿ ಕೋರ್ಟ್‌ ಮೊರೆ ಹೋಗಿದ್ದಾರೆ. ನನಗೆ ಸೂಕ್ತ ರಕ್ಷಣೆ ನೀಡುವಂತೆ ಅವರು ಕೋರ್ಟ್‌ ಗೆ ಮನವಿ ಸಲ್ಲಿಸಿದ್ದಾರೆ.

ಇನ್ನೂ,   ನಗರಸಭೆ ಪೌರಾಯುಕ್ತೆಗೆ ನಿಂದನೆ ಹಾಗೂ ಜೀವಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಎಫ್ಐಆರ್ ರದ್ದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಕ್ರಮವಾಗಿ ಅಳವಡಿಸಿದ್ದ ಬ್ಯಾನರ್ ತೆರವು ಮಾಡಿದ್ದಕ್ಕೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಕರೆ ಮಾಡಿ ನಿಂದಿಸಿದ್ದಲ್ಲದೇ ಜೀವ ಬೆದರಿಕೆ ಹಾಕಿದ್ದರು. ಈ ಕುರಿತ ಆಡಿಯೋ ವೈರಲ್ ಆಗಿತ್ತು. ಕಾಂಗ್ರೆಸ್ ಮುಖಂಡನ ವಿರುದ್ಧ ಅಮೃತಾ ಗೌಡ ದೂರು ದಾಖಲಿಸಿದ್ದರು.

ಪೌರಾಯುಕ್ತಗೆ ಬೆದರಿಕೆ ಹಾಕಿದ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಬಂಧನ ಭೀತಿಯಲ್ಲಿರುವ ರಾಜೀವ್ ಗೌಡ ತಲೆಮರೆಸಿಕೊಂಡಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular