HomeLatest Newsಮಾಜಿ ಸೈನಿಕರ ಮಕ್ಕಳಿಗೆ ಶಿಷ್ಯವೇತನ : ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಮಾಜಿ ಸೈನಿಕರ ಮಕ್ಕಳಿಗೆ ಶಿಷ್ಯವೇತನ : ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಪ್ರಸ್ತಕ್ತ ಸಾಲಿನಲ್ಲಿ ಒಂದನೇ ತರಗತಿಯಿಂದ ಅಂತಿಮ ವರ್ಷದ ಪದವಿ, ಡಿಪ್ಲೋಮ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಕರ್ನಾಟಕ ಮೂಲ ನಿವಾಸಿ ಮಾಜಿ ಸೈನಿಕರ ಮಕ್ಕಳ ಶಿಷ್ಯವೇತನಕ್ಕಾಗಿ ಅರ್ಜಿ ಸಲ್ಲಿಕೆ ಅವಧಿಯನ್ನು ಜನವರಿ 31 ರವರಗೆ ವಿಸ್ತರಿಸಲಾಗಿದೆ.

ಕೇಂದ್ರಿಯ ಸೈನಿಕ ಮಂಡಳಿ ಮತ್ತು ಇತರೆ ಸರ್ಕಾರಿ ಮೂಲಗಳಿಂದ ಯಾವುದೇ ಶಿಷ್ಯವೇತನವನ್ನು ಪಡೆಯದಿರುವ ಮಾಜಿ ಸೈನಿಕರ ಮಕ್ಕಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.

ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಶಿವಮೊಗ್ಗ ಕಚೇರಿಯಲ್ಲಿ ಶುಲ್ಕ ರಹಿತ ಅರ್ಜಿಗಳನ್ನು ವಿತರಿಸಲಾಗುತ್ತಿದ್ದು, ಭರ್ತಿ ಮಾಡಿದ ಅರ್ಜಿಗಳನ್ನು ಜ.31 ರೊಳಗಾಗಿ ಉಪನಿರ್ದೇಶಕರು, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಶಿವಮೊಗ್ಗ ಕಚೇರಿಗೆ ಸಲ್ಲಿಸಲು ಕೋರಿದೆ.ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08182-220925 ಗೆ ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಉಪನಿರ್ದೇಶಕ ಡಾ.ಸಿ.ಎ.ಹಿರೇಮಠ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular