ಬೆಂಗಳೂರು: ಆರಕ್ಷಕನೇ ಭಕ್ಷಕನಾಗಿರುವ ಮತ್ತೊಂದು ಪ್ರಕರಣ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ. ಪಿಯು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಪೊಲೀಸ್ ಕಾನ್ಸ್ ಟೇಬಲ್ ಓರ್ವರನ್ನು ಬಂಧಿಸಲಾಗಿದೆ.
ಆರ್.ಟಿ.ನಗರದ ಪೊಲೀಸ್ ಕಾನ್ಸ್ ಟೇಬಲ್ ಯಮನಾ ನಾಯಕ್ ಬಂಧಿತ ಆರೋಪಿ. ಪ್ರಥಮ ಪಿಯುಸಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಉಪ್ಪಾರ ಪೇಟೆ ಠಾಣೆ ಪೊಲೀಸರು ಕಾನ್ಸ್ ಟೆಬಲ್ ಬಂಧಿಸಿದ್ದಾರೆ.
ಫ್ರೀಡಂಪಾರ್ಕ್ ನಲ್ಲಿ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಪೊಲೀಸ್ ಕಾನ್ಸ್ ಟೇಬಲ್ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದೆ. ಈ ಬಗ್ಗೆ ಉಪ್ಪಾರಪೇಟೆ ಠಾಣೆಯಲ್ಲಿ ಸಂತ್ರಸ್ತೆ ದೂರು ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ಪೋಕ್ಸೋ ಕೇಸ್ ದಾಖಲಾಗಿತ್ತು. ಇದೀಗ ಆರೋಪಿ ಪಿಸಿ ನಾಯಕ್ ನನ್ನು ಬಂಧಿಸಲಾಗಿದೆ.

