HomeLatest NewsBIG NEWS: ಎಷ್ಟು ದಿನ ತಪ್ಪಿಸಿಕೊಳ್ಳಲು ಸಾಧ್ಯ? ರಾಜೀವ್ ಗೌಡನನ್ನು ಮುಲಾಜಿಲ್ಲದೇ ಬಂಧಿಸುತ್ತೇವೆ: ಗೃಹ ಸಚಿವ...

BIG NEWS: ಎಷ್ಟು ದಿನ ತಪ್ಪಿಸಿಕೊಳ್ಳಲು ಸಾಧ್ಯ? ರಾಜೀವ್ ಗೌಡನನ್ನು ಮುಲಾಜಿಲ್ಲದೇ ಬಂಧಿಸುತ್ತೇವೆ: ಗೃಹ ಸಚಿವ ಪರಮೇಶ್ವರ್

ಬೆಂಗಳೂರು: ನಗರಸಭೆ ಪೌರಾಯುಕ್ತೆಗೆ ನಿಂದನೆ ಹಾಗೂ ಜೀವ ಬೆದರಿಕೆ ಹಾಕಿದ್ದ ರಾಜೀವ್ ಗೌಡ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ. ಮೊದಲ ದಿನವೇ ಅವರನ್ನು ಬಂಧಿಸಲು ಆದೇಶ ನೀಡಿದ್ದೆ. ಬಂಧಿಸುವಷ್ಟರಲ್ಲಿ ತಪ್ಪಿಸಿಕೊಂಡು ಹೋಗಿದ್ದಾರೆ ಎಂದು ತಿಳಿಸಿದರು.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾಅತನಾಡಿದ ಗೃಹ ಸಚಿವ ಪರಮೇಶ್ವರ್, ರಾಜೀವ್ ಗೌಡ ಎಷ್ಟು ದಿನ ಅಂತಾ ತಪ್ಪಿಸಿಕೊಳ್ಳಲು ಸಾಧ್ಯ? ಅವರನ್ನು ಮುಲಾಜಿಲ್ಲದೇ ಬಂಧಿಸುತ್ತೇವೆ ಎಂದು ಹೇಳಿದರು.

ರಾಜೀವ್ ಗೌಡರನ್ನು ಖಂಡಿತವಗಿ ಬಂಧಿಸುತ್ತೇವೆ. ಯಾರ ಒತ್ತಡಕ್ಕೂ ಮಣಿಯುವ ಪ್ರಶ್ನೆ ಇಲ್ಲ ಎಂದು ಸ್ಪಷ್ಟಪಡಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇದೇ ವೇಳೆ ಬೆಳಗಾವಿಯಲ್ಲಿ 400 ಕೋಟಿ ದರೋಡೆ ಪ್ರಕರಣ ವಿಚಾರವಾಗಿ, ಮಹಾರಾಷ್ಟ್ರ ಪೊಲೀಸರು ನಮ್ಮ ಪೊಲೀಸರಿಗೆ ಪತ್ರ ಬರೆದಿದ್ದಾರೆ. ತನಿಖೆಗೆ ನಮ್ಮ ಸಹಕಾರ ಬೇಕು ಎಂದು ಕೇಳಿದ್ದಾರೆ ಅದರ ಬಗ್ಗೆ ಮಾಹಿತಿ ನೀಡಲು ಕೇಳಿದ್ದೇನೆ. ತನಿಖೆ ಇನ್ನೂ ಆರಂಭಿಕ ಹಂತದಲ್ಲಿದೆ. ಹೆಚ್ಚಿನ ಮಾಹಿತಿ ಸಿಕ್ಕ ಬಳಿಕ ನಮ್ಮ ಪೊಲೀಸರು ಏನು ಕ್ರಮ ಕೈಗೊಳ್ಳಬೇಕೋ ಕೈಗೊಳ್ಳುತ್ತಾರೆ ಎಂದು ಹೇಳಿದರು.

For Latest News Updates, Join Our Whatsapp Community🚩
RELATED ARTICLES

Most Popular