ಬೆಂಗಳೂರು: ವಿಧಾನಸಭೆ ಅಧಿವೇಶನದಲ್ಲಿ ಸಚಿವ ಬೈರತಿ ಸುರೇಶ್ ವಿರುದ್ಧ ಶಾಸಕ ಎಸ್. ಸುರೇಶ್ ಕುಮಾರ್ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಬೆಂಗಳೂರು ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಮುಖಂಡರು ವಿಧಾನಸೌಧ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಶನಿವಾರ ಸುರೇಶ್ ಕುಮಾರ್ ನಿವಾಸದ ಬಳಿ ಪ್ರತಿಭಟನೆ ನಡೆಸಿ ಮಹಿಳೆಯರಿಗೆ ಅಪಮಾನ ಮಾಡಿದ ಶಾಸಕರು ಕ್ಷಮೆ ಯಾಚಿಸಲಿ ಎಂದು ಪೋಸ್ಟರ್ ಹಿಡಿದು ಒತ್ತಾಯಿಸಿದ್ದರು.
ಭಾನುವಾರ ಕಾಂಗ್ರೆಸ್ ಮುಖಂಡರ ನಿಯೋಗ ವಿಧಾನಸೌಧ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಮಹಿಳೆಯರ ಗೌರವಕ್ಕೆ ಗೌರವಕ್ಕೆ ಧಕ್ಕೆ ತರುವ ಹೇಳಿಕೆ ನೀಡಿದ ಸುರೇಶ್ ಕುಮಾರ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದೆ.

