ಶಿವಮೊಗ್ಗ: ಕರ್ನಾಟಕ ಪಬ್ಲಿಕ್ ಸ್ಕೂಲ್(ಕೆಪಿಎಸ್) ಶಾಲೆಗಳಿಗೆ ದೈಹಿಕ ಶಿಕ್ಷಕರು ಸಂಗೀತ ಶಿಕ್ಷಕರ ಜೊತೆಗೆ ಕಲಾ ಶಿಕ್ಷಕರ ನೇಮಕಾತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.
ಭಾನುವಾರ ನಗರದಲ್ಲಿ ಮಾತನಾಡಿದ ಸಚಿವರು, ಮುಖ್ಯಮಂತ್ರಿಗಳು ಕೆಪಿಎಸ್ ಶಾಲೆಗಳಿಗೆ ಶಿವಮೊಗ್ಗದಿಂದಲೇ ಚಾಲನೆ ನೀಡಲಿದ್ದಾರೆ ಎಂದು ಮಾಹಿತಿ ನೀಡಿದರು.
ಅನುದಾನರಹಿತ ಕನ್ನಡ ಶಾಲೆಗಳಿಗೆ ಬಜೆಟ್ ನಲ್ಲಿ ಅನುದಾನ ನೀಡುವಂತೆ ಸಿಎಂಗೆ ಮನವಿ ಸಲ್ಲಿಸಲಾಗಿದೆ. ಫೆಬ್ರವರಿ 2ರಂದು ಸಿಎಂ ಬಜೆಟ್ ಸಿದ್ಧತೆ ಪೂರ್ವಭಾವಿ ಸಭೆ ಕರೆದಿದ್ದಾರೆ. 1995 ರಿಂದ ಇರುವ ಅನುದಾನರಹಿತ ಕನ್ನಡ ಶಾಲೆಗಳಿಗೆ ಅನುದಾನ ನೀಡುವಂತೆ ಮತ್ತೆ ಪ್ರಸ್ತಾಪಿಸಲಾಗುವುದು ಎಂದು ಹೇಳಿದ್ದಾರೆ.

