HomeLatest NewsGOOD NEWS : ಮುಂದಿನ ಶೈಕ್ಷಣಿಕ ವರ್ಷದೊಳಗೆ  10,800 ಹೊಸ ಶಿಕ್ಷಕರ ನೇಮಕಾತಿ : ಸಚಿವ...

GOOD NEWS : ಮುಂದಿನ ಶೈಕ್ಷಣಿಕ ವರ್ಷದೊಳಗೆ  10,800 ಹೊಸ ಶಿಕ್ಷಕರ ನೇಮಕಾತಿ : ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ :   ಮುಂದಿನ ಶೈಕ್ಷಣಿಕ ವರ್ಷದಿಂದ ಎಲ್.ಕೆ.ಜಿಯಿಂದ 12ನೇ ತರಗತಿವರೆಗೆ ಉಚಿತ ಪಠ್ಯಪುಸ್ತಕ ಗಳನ್ನು ನೀಡಲಾಗುವುದು ಹಾಗೂ ಉಚಿತ ಪುಸ್ತಕ (ನೋಟ್ ಬುಕ್) ನೀಡುವ ಪ್ರಸ್ತಾವನೆಯು ಸರ್ಕಾರದ ಹಂತದಲ್ಲಿದೆ ಎಂದು ಸಚಿವ ಮಧು ಬಂಗಾರಪ್ಪ ಹೇಳಿದರು.

ನಗರದ ನೆಹರೂ ಕ್ರೀಡಾಂಗಣದಲ್ಲಿ ಸೋಮವಾರ ಏರ್ಪಡಿಸಲಾಗಿದ್ದ ಗಣರಾಜ್ಯೋತ್ಸವ ದಿನಾಚರಣೆಯ ಧ್ವಜಾರೋಹಣ ನೆರವೇರಿಸಿ ನಂತರ ಮಾತನಾಡಿದರು.

ಗುಣಮಟ್ಟದ ಶಿಕ್ಷಣಕ್ಕೆ ಶಿಕ್ಷಕರೇ ಆಧಾರ. ನಾವು ಈಗಾಗಲೇ 14,499 ಶಿಕ್ಷಕರನ್ನು ನೇಮಕ ಮಾಡಿಕೊಂಡಿದ್ದೇವೆ. ಶಿಕ್ಷಕರ ಕೊರತೆ ನೀಗಿಸಲು ಪ್ರಥಮ ಬಾರಿಗೆ ನಮ್ಮ ಸರ್ಕಾರ 51000 ಅತಿಥಿ ಶಿಕ್ಷಕರನ್ನುನೇಮಿಸಿದೆ. ಮುಂದಿನ ಶೈಕ್ಷಣಿಕ ವರ್ಷದೊಳಗೆ ಇನ್ನೂ 10,800 ಹೊಸ ಶಿಕ್ಷಕರನ್ನು ಹಾಗೂ ಅನುದಾನಿತ ಶಾಲೆಗಳಿಗೆ ಶಿಕ್ಷಕರ ನೇಮಕಾತಿಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಸಚಿವ ಮಧು ಬಂಗಾರಪ್ಪ ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಮ್ಮ ಶಿವಮೊಗ್ಗ ಜಿಲ್ಲೆಯು 2024-25ನೇ ಸಾಲಿನ ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ರಾಜ್ಯಕ್ಕೆ 4ನೇ ಸ್ಥಾನ ಪಡೆದಿರುವುದು ನಮ್ಮೆಲ್ಲರ ಹೆಮ್ಮೆ.ಅಭಿವೃದ್ಧಿ ಎಂಬುದು ನಿರಂತರ ಪ್ರಕ್ರಿಯೆ. ನಮ್ಮ ಸರ್ಕಾರ ಸಮಗ್ರ ಕರ್ನಾಟಕದ ಅಭಿವೃದ್ಧಿಗೆ ಪಣತೊಟ್ಟಿದೆ ಎಂದ ಅವರುಗಣರಾಜ್ಯೋತ್ಸವದ ಈ ಶುಭ ದಿನದಂದು, ನಾವೆಲ್ಲರೂ ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯೋಣ. ದ್ವೇಷವನ್ನು ಬಿಟ್ಟು, ಪ್ರೀತಿ ಮತ್ತು ಸೌಹಾರ್ದತೆಯಿಂದ ಬದುಕೋಣ. ಉತ್ತಮ ಸಮಾಜವನ್ನು ನಿರ್ಮಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದರು.

ಕಾರ್ಯಕ್ರಮದಲ್ಲಿ ಪ್ರೊಬೇಷನರಿ ಐಪಿಎಸ್ ಕವಾಯತು ದಂಡ ನಾಯಕಿ ಮೇಘಾ ಅಗರ್ವಾಲ್ ಕನ್ನಡದಲ್ಲಿ ಆದೇಶ ನೀಡಿದರು.ಶಿಸ್ತಿನ ಪಥ ಸಂಚಲನ ಪ್ರದರ್ಶಿಸಿದ ಕಸ್ತೂರಿಬಾ ಬಾಲಿಕಾ ಪ್ರೌಢಶಾಲೆಯ ಎನ್ ಸಿ ಸಿ ತಂಡ ಪ್ರಥಮ, ಗಾಜನೂರು ಮೊರಾರ್ಜಿ ದೇಸಾಯಿ (ಬಾಲಕಿಯರ ತಂಡ)ವಸತಿ ಶಾಲೆ ದ್ವಿತೀಯ, ಜವಾಹರ ನವೋದಯ ವಸತಿ ಬಾಲಕರ ವಿಭಾಗ ಮೂರನೇ ಸ್ಥಾನ ಪಡೆಯಿತು.ಸಾಂಸ್ಕೃತಿಕ ಕಾರ್ಯಕ್ರಮಗಳ ಪ್ರದರ್ಶನದಲ್ಲಿ ಪೊಲೀಸ್ ಪಬ್ಲಿಕ್ ಶಾಲೆಗೆ ಪ್ರಥಮ, ರಾಮಕೃಷ್ಣ ವಿದ್ಯಾನಿಕೇತನ ಶಾಲೆಗೆ ದ್ವಿತೀಯ, ಜ್ಞಾನದೀಪ ಶಾಲೆ ತೃತೀಯ ಬಹುಮಾನ ಪಡೆದರು.

ಕಾರ್ಯಕ್ರಮದಲ್ಲಿ ಶಾಸಕರಾದ ಎಸ್ ಎನ್ ಚನ್ನಬಸಪ್ಪ, ವಿಧಾನ ಪರಿಷತ್ ಶಾಸಕರಾದ ಡಾ.ಧನಂಜಯ ಸರ್ಜಿ, ರಾಜ್ಯ ಜವಳಿ ಮೂಲಸೌಲಭ್ಯ(ವಿದ್ಯುತ್ ಮಗ್ಗಗಳ)ಚೇತನ್ ಕೆ, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಚಂದ್ರಭೂಪಾಲ್, ಕೆಳದಿ ಶಿವಪ್ಪನಾಯಕಕೃಷಿಮತ್ತು ತೋಟಗಾರಿಕೆ ವಿಜ್ಞಾನಗಳ ವಿವಿ ಆಡಳಿತ ಮಂಡಳಿ ಸದಸ್ಯ ದೇವಿ ಕುಮಾರ್, ಜನಪ್ರತಿನಿಧಿಗಳು, ಮುಖಂಡರು, ಜಿಲ್ಲಾಧಿಕಾರಿಗಳಾದ ಪ್ರಭುಲಿಂಗ ಕವಳಿಕಟ್ಟಿ, ಜಿ.ಪಂ. ಸಿಇಓ ಹೇಮಂತ್, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ನಿಖಿಲ್ ಬಿ, ಅಪರ ಜಿಲ್ಲಾಧಿಕಾರಿ, ಎಸಿ, ತಹಶಿಲ್ದಾರ್, ಅಧಿಕಾರಿಗಳು, ವಿದ್ಯಾರ್ಥಿಗಳು, ಸಾರ್ವಜನಿಕರು ಪಾಲ್ಗೊಂಡಿದ್ದರು.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular