HomeKarnatakaBREAKING: ಬೆಂಗಳೂರಿನಲ್ಲಿ ದುಷ್ಕರ್ಮಿಗಳ ಅಟ್ಟಹಾಸ: ಹಾಡಹಗಲೇ ನಡುರಸ್ತೆಯಲ್ಲಿ ಯುವಕನ ಕಿಡ್ನ್ಯಾಪ್ ಗೆ ಯತ್ನ

BREAKING: ಬೆಂಗಳೂರಿನಲ್ಲಿ ದುಷ್ಕರ್ಮಿಗಳ ಅಟ್ಟಹಾಸ: ಹಾಡಹಗಲೇ ನಡುರಸ್ತೆಯಲ್ಲಿ ಯುವಕನ ಕಿಡ್ನ್ಯಾಪ್ ಗೆ ಯತ್ನ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಹಾಗೂ ಬೆಂಗಳೂರು ಹೊರವಲಯದಲ್ಲಿ ಪುಡಿರೌಡಿಗಳ ಅಟ್ಟಹಾಸ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಹಾಡಹಗಲೇ ಹಲ್ಲೆ, ಕಿಡ್ನ್ಯಾಪ್ ನಂತಹ ಪ್ರಕರಣಗಳಲಿ ತೊಡಗಿದ್ದು, ದುಷ್ಕರ್ಮಿಗಳಿಗೆ ಪೊಲೀಸರು, ಸಾರ್ವಜನಿಕರ ಬಗ್ಗೆ ಕಿಂಚ್ಚಿತ್ತೂ ಭಯ ಎಂಬುದು ಇಲ್ಲ. ಜನನಿಬಿಡ ರಸ್ತೆಯಲ್ಲಿ ಹಾಡಹಗಲೇ ಯುವಕನೊಬ್ಬನನ್ನು ದುಷ್ಕರ್ಮಿಗಳು ಕಿಡ್ನ್ಯಾಪ್ ಮಾಡಲು ಯತ್ನಿಸಿರುವ ಘಟನೆ ಬೆಂಗಳೂರಿನ ಆನೇಕಲ್ ಬಳಿ ನಡೆದಿದೆ.

ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಇಂಡ್ಲವಾಡಿ ಕ್ರಾಸ್ ನಲ್ಲಿ ದುಷ್ಕರ್ಮಿಗಳ ಗುಂಪು ಯುವಕನ ಮೇಲೆ ಹಲ್ಲೆ ನಡೆಸಿ ಕಿಡ್ನ್ಯಾಪ್ ಮಾಡಲು ಯತ್ನಿಸಿದೆ. ಕಾರಿನಲ್ಲಿ ಬಂದ ದುಷ್ಕರ್ಮಿಗಳು, ಯುವಕನನ್ನು ಹಿಡಿದು ಮನಬಂದಂತೆ ಥಳಿಸಿದ್ದಾರೆ.

ಯುವಕ ತನಗೆ ಆಪರೇಷನ್ ಆಗಿದೆ ಬಿಟ್ಟು ಬಿಡಿ ಎಂದು ಗೋಗರೆದರೂ ಕಿರಾತಕರ ಮನಸ್ಸು ಕರಗಿಲ್ಲ. ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಅಲದೇ ಯುವಕನನ್ನು ಕಾರಿಗೆ ಎಳೆದೊಯ್ದು ಕಿಡ್ನ್ಯಾಪ್ ಮಾಡು ಯತ್ನಿಸಿದ್ದಾರೆ. ಸಾರ್ವಜನಿಕರು ಓಡಾಡುತ್ತಿರುವ ಜನನಿಬಿಡ ರಸ್ತೆಯಲ್ಲಿಯೇ ಈ ಘಟನೆ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಯುವಕ ಜೋರಾಗಿ ಕಿರುಚಾಡುತ್ತಿದ್ದಂತೆ ಸ್ಥಳೀಯರು ಸ್ಥಳಕ್ಕಾಗಮಿಸಿ ದುಷ್ಕರ್ಮಿಗಳನ್ನು ಪ್ರಶ್ನೆ ಮಾಡಿದ್ದಾರೆ. ಈ ವೇಳೆ ಯುವಕನನ್ನು ಸ್ಥಳದಲ್ಲೇ ಬಿಟ್ಟು ದುಷ್ಕರ್ಮಿಗಳು ಕಾರಿನಲ್ಲಿ ಎಸ್ಕೇಪ್ ಆಗಿದ್ದಾರೆ. ಹಲ್ಲೆಗೊಳಗಾದ ಯುವಕ ಆಸ್ಪತ್ರೆಗೆ ದಾಖಲಾಗಿದ್ದಾನೆ. ಹಾಡಹಗಲೇ, ಜನನಿಬಿಡ ರಸ್ತೆಯಲ್ಲಿ ಪುಡಿರೌಡಿಗಳು ಯುವಕನ ಮೇಲೆ ಅಟ್ಟಹಾಸ ಮೆರೆದಿರುವ ಈ ಘಟನೆಯಿಂದ ಸ್ಥಳೀಯರು ಬೆಚ್ಚಿ ಬಿದ್ದಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular