HomeKarnatakaಬೆಂಗಳೂರಲ್ಲಿ ವಿದೇಶಿಯರಿಗೆ ಮನೆ ಬಾಡಿಗೆ ಕೊಡಲು ಹೊಸ ನಿಯಮ

ಬೆಂಗಳೂರಲ್ಲಿ ವಿದೇಶಿಯರಿಗೆ ಮನೆ ಬಾಡಿಗೆ ಕೊಡಲು ಹೊಸ ನಿಯಮ

ಬೆಂಗಳೂರು ನಗರದಲ್ಲಿ ಬಾಡಿಗೆ ಮನೆಗೆ ಭಾರೀ ಬೇಡಿಕೆ ಇದೆ. ಹೊರ ರಾಜ್ಯದವರು, ವಿದೇಶದವರು ಬಂದು ನಗರದಲ್ಲಿ ನೆಲೆಸಿದ್ದಾರೆ. ಆದರೆ ವಿದೇಶಿಯರಿಗೆ ಮನೆ ಬಾಡಿಗೆ ಕೊಡುವ ಮುನ್ನ ಇದನ್ನು ತಿಳಿಯಿರಿ. ಪೊಲೀಸರು ಕೆಲವು ಸೂಚನೆಗಳನ್ನು ನೀಡಿದ್ದಾರೆ.

ಈಶಾನ್ಯ ವಿಭಾಗದ ಪೊಲೀಸರು ಕೊತ್ತನೂರು ವ್ಯಾಪ್ತಿಯಲ್ಲಿರುವ ಮನೆ ಮಾಲೀಕರಿಗೆ ವೀಸಾ ಅವಧಿ ಮೀರಿದ ಮತ್ತು ವಿದೇಶಿ ಪ್ರಜೆಗಳು ಮಾದಕವಸ್ತು ಮಾರಾಟದಲ್ಲಿ ಭಾಗಿಯಾಗಿರುವುದನ್ನು ಉಲ್ಲೇಖಿಸಿ ಕಠಿಣ ಎಚ್ಚರಿಕೆಗಳನ್ನು ನೀಡಿದ್ದಾರೆ.

ಇಂತಹ ನಿಯಮ ಉಲ್ಲಂಘನೆಗಳಿಗಾಗಿ ಕಾನೂನು ಕ್ರಮವನ್ನು ಕೈಗೊಳ್ಳಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ. ಬೆಂಗಳೂರು ನಗರ ಪೊಲೀಸ್ ಈಶಾನ್ಯ ವಿಭಾಗವು ಮನೆ ಮಾಲೀಕರಿಗೆ ವಿದೇಶಿ ಪ್ರಜೆಗಳಿಗೆ ಮನೆಗಳನ್ನು ಬಾಡಿಗೆಗೆ ನೀಡುವ ಮೊದಲು ಕಾನೂನು ಪ್ರಕ್ರಿಯೆಗಳನ್ನು ಕಟ್ಟುನಿಟ್ಟಾಗಿ ಅನುಸರಿಸುವಂತೆ ಸಲಹೆ ನೀಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡದೆ ಮನೆಗಳನ್ನು ಬಾಡಿಗೆಗೆ ನೀಡಿದ್ದಕ್ಕಾಗಿ ಕೊತ್ತನೂರು ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿರುವ ಮನೆ ಮಾಲೀಕರ ವಿರುದ್ಧ ಪೊಲೀಸರು ಕಾನೂನು ಕ್ರಮ ಕೈಗೊಂಡ ನಂತರ ಈ ಎಚ್ಚರಿಕೆಗಳನ್ನು ನೀಡಲಾಗಿದೆ.

ಪೊಲೀಸರ ಸಲಹೆಗಳು: ಈಶಾನ್ಯ ವಿಭಾಗದ ಉಪ ಪೊಲೀಸ್ ಆಯುಕ್ತರ ಕಚೇರಿಯು ಹೊರಡಿಸಿದ ಸಲಹೆಯ ಪ್ರಕಾರ, ವಿದೇಶಿ ಪ್ರಜೆಗಳು ಪೊಲೀಸರಿಗೆ ತಿಳಿಸದೇ ಬಾಡಿಗೆ ಮನೆಗಳಲ್ಲಿ ವಾಸಿಸುತ್ತಿರುವ ಹಲವಾರು ಪ್ರಕರಣಗಳು ಪತ್ತೆಯಾಗಿವೆ.

ಕೆಲವು ಸಂದರ್ಭಗಳಲ್ಲಿ ವಿದೇಶಿಯರು ತಮ್ಮ ವೀಸಾ ಅವಧಿ ಮುಗಿದ ನಂತರವೂ ಇಲ್ಲಿಯೇ ಇದ್ದಾರೆ ಪೊಲೀಸ್ ಮೂಲಗಳು ಬಹಿರಂಗಪಡಿಸಿವೆ. ಇದು ಗಂಭೀರ ಭದ್ರತಾ ಕಳವಳಗಳನ್ನು ಹುಟ್ಟುಹಾಕಿದೆ. ಮಾದಕವಸ್ತು ಮಾರಾಟ ಪ್ರಕರಣಗಳಲ್ಲಿ ವಿದೇಶಿ ಪ್ರಜೆಗಳು ಹೆಚ್ಚಾಗಿ ಪಾಲ್ಗೊಳ್ಳುತ್ತಿದ್ದು, ಕಟ್ಟುನಿಟ್ಟಾದ ಮೇಲ್ವಿಚಾರಣೆ ಮತ್ತು ನಿಯಮಗಳನ್ನು ಜಾರಿಗೊಳಿಸುವುದು ಅಗತ್ಯವಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಆದ್ದರಿಂದ ವಿದೇಶಿ ಪ್ರಜೆಗಳಿಗೆ ಬಾಡಿಗೆಗೆ ಮನೆಗಳನ್ನು ನೀಡುವ ಮೊದಲು ಈ ನಿಯಮಗಳನ್ನು ಅನುಸರಿಸಿ ಎಂದು ಸಲಹೆ ನೀಡಿದ್ದಾರೆ. ಇದನ್ನು ಉಲ್ಲಂಘಿಸುವವರ ವಿರುದ್ಧ ಕಾನೂನು ಕ್ರಮದ ಎಚ್ಚರಿಕೆ ನೀಡಿದ್ದಾರೆ.

ಪೊಲೀಸರಿಗೆ ಮಾಹಿತಿ ನೀಡದೆ ವಿದೇಶಿ ಪ್ರಜೆಗಳಿಗೆ ಮನೆಗಳನ್ನು ಬಾಡಿಗೆಗೆ ನೀಡುವುದು ಕಾನೂನಿನ ಸ್ಪಷ್ಟ ಉಲ್ಲಂಘನೆಯಾಗಿದೆ. 1946ರ ಸೆಕ್ಷನ್ 7 ವಿದೇಶಿಯರ ನೋಂದಣಿ ನಿಯಮಗಳು, 1992ರ ನಿಯಮ 14 (ಒ) ಅಡಿ ವಿದೇಶಿಯರ ವಸತಿ ಕುರಿತು ಪೊಲೀಸರು ಮಾಹಿತಿ ಸಂಗ್ರಹ ಮಾಡುತ್ತಿದ್ದಾರೆ.

ಸಾರ್ವಜನಿಕರಿಗೆ ಸ್ಪಷ್ಟ ಸೂಚನೆ ನೀಡಲಾಗಿದ್ದು, ವಿದೇಶಿ ಪ್ರಜೆಗಳಿಗೆ ಮನೆಗಳು ಅಥವಾ ಫ್ಲಾಟ್‌ಗಳನ್ನು ಬಾಡಿಗೆಗೆ ನೀಡುವಾಗ ಹತ್ತಿರದ ಪೊಲೀಸ್ ಠಾಣೆಗೆ ಕಡ್ಡಾಯವಾಗಿ ಮಾಹಿತಿ ತಿಳಿಸಬೇಕಿದೆ. ಈ ಸಲಹೆಯು ನಿರ್ದಿಷ್ಟವಾಗಿ ಕೊತ್ತನೂರು ಪೊಲೀಸ್ ಠಾಣೆಯ ವ್ಯಾಪ್ತಿಗೆ ಅನ್ವಯಿಸುತ್ತದೆ. ಆದರೆ ನಗರದ ಇತರ ಭಾಗಗಳಲ್ಲಿಯೂ ಇದೇ ರೀತಿಯ ನಿಯಮವನ್ನು ಜಾರಿಗೊಳಿಸಬಹುದಾಗಿದೆ.

ಈ ಕ್ರಮವು ಸಂಪೂರ್ಣವಾಗಿ ಸಾರ್ವಜನಿಕ ಸುರಕ್ಷತೆ, ಕಾನೂನು ಜಾರಿ ಮತ್ತು ರಾಷ್ಟ್ರೀಯ ಭದ್ರತೆಯ ಹಿತಾಸಕ್ತಿಯನ್ನು ಹೊಂದಿದೆ. ಇದಕ್ಕೆ ಮನೆ ಮಾಲೀಕರ ಸಹಕಾರವು ಅಗತ್ಯವಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

Most Popular