HomeLatest Newsಕಾಂಗ್ರೆಸ್ ಕಾರ್ಯಕರ್ತರ ವರ್ತನೆ ಖಂಡಿಸಿದ ಗೃಹ ಸಚಿವ ಪರಮೇಶ್ವರ್

ಕಾಂಗ್ರೆಸ್ ಕಾರ್ಯಕರ್ತರ ವರ್ತನೆ ಖಂಡಿಸಿದ ಗೃಹ ಸಚಿವ ಪರಮೇಶ್ವರ್

ಬೆಂಗಳೂರು: ಬಿಜೆಪಿ ಶಾಸಕ ಎಸ್. ಸುರೇಶ್ ಕುಮಾರ್ ಸದನದಲ್ಲಿ ಆಡಿದ ಮಾತುಗಳನ್ನು ವಿರೋಧಿಸಿ ಅವರ ಮನೆಯ ಗೋಡೆಗಳಿಗೆ ಕೀಳು ಮಟ್ಟದ ಪೋಸ್ಟರ್ ಅಂಟಿಸಿ ತೇಜೋವಧೆ ಮಾಡಿದ ಪ್ರಕರಣವನ್ನು ಹಕ್ಕು ಬಾಧ್ಯತಾ ಸಮಿತಿಗೆ ವಹಿಸುವುದಾಗಿ ಸ್ವೀಕರ್ ಯು.ಟಿ.ಖಾದರ್ ರೂಲಿಂಗ್ ನೀಡಿದ್ದಾರೆ.

ವಿಧಾನಸಭೆಯಲ್ಲಿ ವಿಷಯ ಪ್ರಸ್ತಾಪಿಸಿದ ಸುರೇಶ್ ಕುಮಾರ್, ಸಾಮಾನ್ಯವಾಗಿ ರೂಢಿಯಲ್ಲಿರುವ ಒಂದು ಮಾತನ್ನು ನಾನು ಹೇಳಿದ್ದೇನೆ. ನಂತರ ಅದನ್ನು ಕಡತದಿಂದ ತೆಗೆಯುವಂತೆ ಮತ್ತು ಆ ಮಾತನ್ನು ವಾಪಸ್ ತೆಗೆದುಕೊಳ್ಳುತ್ತೇನೆ ಎಂದು ತಿಳಿಸಿದ್ದೇನೆ. ಮುಖ್ಯಮಂತ್ರಿಗಳು ಕೂಡ ಕಡತದಿಂದ ಮಾತು ತೆಗೆಯುವಂತೆ ಹೇಳಿದ್ದರು. ಪ್ರಕರಣ ಮುಕ್ತಾಯವಾಗಿದೆ ಎಂದು ಅಂದುಕೊಂಡಿದ್ದೆ. ಆದರೆ, ಕಾಂಗ್ರೆಸ್ ನ ಕೆಲವು ಕಾರ್ಯಕರ್ತರು ನಮ್ಮ ಮನೆಯ ಗೋಡೆಯ ಮೇಲೆ ಪೋಸ್ಟರ್ ಅಂಟಿಸಿದ್ದು, ನನ್ನ ಮೇಲೆ ಕ್ರಮ ಕೈಗೊಳ್ಳಬೇಕೆಂದು ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಶಾಸಕನಾದ ನನ್ನ ಕರ್ತವ್ಯ ನಿರ್ವಹಣೆಗೆ ಚ್ಯುತಿ ಉಂಟು ಮಾಡಿದೆ. ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.

ಪ್ರತಿಪಕ್ಷ ನಾಯಕ ಆರ್.ಅಶೋಕ್, ಕೂಡ ಈ ಬಗ್ಗೆ ಪ್ರಸ್ತಾಪಿಸಿ, ಇಂತಹ ಕೆಟ್ಟ ಸಂಪ್ರದಾಯಕ್ಕೆ ತಡೆ ಹಾಕಬೇಕು ಎಂದು ಒತ್ತಾಯಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಘಟನೆಯನ್ನು ಖಂಡಿಸಿದ ಗೃಹ ಸಚಿವ ಪರಮೇಶ್ವರ್, ಯಾರು ಪೋಸ್ಟರ್ ಅಂಟಿಸಿದ್ದಾರೋ ಅವರ ಬಗ್ಗೆ ಖುದ್ದಾಗಿ ನಾನೇ ವಿಚಾರಿಸುತ್ತೇನೆ. ಶಾಸಕರ ಮನೆ ಬಳಿ ಹೋಗಿ ಈ ರೀತಿ ಮಾಡುವುದು ಒಳ್ಳೆಯ ಬೆಳವಣಿಗೆಯಲ್ಲ. ದೂರು ನೀಡುವ ಹಕ್ಕು ಎಲ್ಲರಿಗೂ ಇದ್ದು, ಪೊಲೀಸರು ಅದನ್ನು ನೋಡಿಕೊಳ್ಳುತ್ತಾರೆ. ಇಂತಹ ಘಟನೆಗಳು ಮುಂದೆ ನಡೆಯದಂತೆ ನಿರ್ಧಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು.

ಸ್ಪೀಕರ್ ಯು.ಟಿ. ಖಾದರ್ ಮಾತನಾಡಿ, ಸದನವೆಂದರೆ ಒಂದು ಕುಟುಂಬ ಇದ್ದಂತೆ. ಇಲ್ಲಿ ನಡೆದ ವಿಚಾರದಲ್ಲಿ ಹೊರಗಡೆ ಇರುವವರು ಮಧ್ಯಪ್ರದೇಶಿಸಬಾರದು. ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು. ಪ್ರಕರಣವನ್ನು ಹಕ್ಕುಚ್ಯುತಿ ಸಮಿತಿಗೆ ವಹಿಸಲಾಗುವುದು ಎಂದು ರೂಲಿಂಗ್ ನೀಡಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular