HomeJobsಕೆಲಸದ ನಿರೀಕ್ಷೆಯಲ್ಲಿದ್ದ ಯುವ ಜನತೆಗೆ ಗುಡ್ ನ್ಯೂಸ್: 75ಕ್ಕೂ ಹೆಚ್ಚು ಪ್ರತಿಷ್ಠಿತ ಕಂಪನಿಗಳಲ್ಲಿ ಉದ್ಯೋಗಾವಕಾಶ

ಕೆಲಸದ ನಿರೀಕ್ಷೆಯಲ್ಲಿದ್ದ ಯುವ ಜನತೆಗೆ ಗುಡ್ ನ್ಯೂಸ್: 75ಕ್ಕೂ ಹೆಚ್ಚು ಪ್ರತಿಷ್ಠಿತ ಕಂಪನಿಗಳಲ್ಲಿ ಉದ್ಯೋಗಾವಕಾಶ

ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ, ಸಂಜೀವಿನಿ-ಕೆಎಸ್‌ಆರ್‌ಎಲ್‌ಎಸ್ ಬೆಂಗಳೂರು, ಜಿಲ್ಲಾ ಪಂಚಾಯತ್, ಜಿಲ್ಲಾ ಕೌಶಲ್ಯ ಮಿಷನ್ ರಾಯಚೂರು ಇವರ ಸಂಯುಕ್ತಾಶ್ರಯದಲ್ಲಿ ಡಿಡಿಯು-ಜಿ.ಕೆವೈ ಯೋಜನೆಯಡಿಯಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳವನ್ನು ಫೆಬ್ರವರಿ 6ರಂದು ರಾಯಚೂರು: ನಗರದ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಪ್ರೇಕ್ಷಾಗೃಹ ಹಮ್ಮಿಕೊಳ್ಳಲಾಗಿದ್ದು, ಜಿಲ್ಲೆಯ ವಿದ್ಯಾವಂತ ಯುವಕ-ಯುವತಿಯರು ಈ ಸದಾವಕಾಶವನ್ನು ಪಡೆಯುವಂತೆ ಕೋರಲಾಗಿದೆ.

ಈ ಉದ್ಯೋಗ ಮೇಳದಲ್ಲಿ ರಾಜ್ಯದ ವಿವಿಧ ಭಾಗಗಳಿಂದ ಮತ್ತು ಸ್ಥಳೀಯವಾಗಿ ಅಂದಾಜು 75ಕ್ಕೂ ಹೆಚ್ಚಿನ ಪ್ರತಿಷ್ಠಿತ ಬೃಹತ್, ಮಧ್ಯಮ, ಸಣ್ಣ ಉದ್ಯೋಗದಾತ ಕಂಪನಿಗಳು ಭಾಗವಹಿಸುತ್ತಿದ್ದು, ಜಿಲ್ಲೆಯ ವಿದ್ಯಾವಂತ ಯುವಕ/ ಯುವತಿಯರಿಗೆ ಪ್ರತಿಷ್ಠಿತ ಖಾಸಗಿ ವಲಯದಲ್ಲಿ ಉದ್ಯೋಗವನ್ನು ಕಲ್ಪಿಸುವುದು ಉದ್ಯೋಗ ಮೇಳದ ಮುಖ್ಯ ಉದ್ದೇಶವಾಗಿದೆ.

ಈ ಉದ್ಯೋಗ ಮೇಳವು ಉದ್ಯೋಗದಾತರ ಸಂಸ್ಥೆಗಳಲ್ಲಿ ಖಾಲಿ ಇರುವ ವಿವಿಧ ಉದ್ಯೋಗಗಳಿಗೆ ಅರ್ಹ ಉದ್ಯೋಗಾಕಾಂಕ್ಷಿಗಳನ್ನು ಆಯ್ಕೆ ಮಾಡಿಕೊಳ್ಳಲಿದ್ದಾರೆ. ಮತ್ತು ಉದ್ಯೋಗಾಕಾಂಕ್ಷಿ ಯುವಕ/ ಯುವತಿಯರು ತಮ್ಮ ಕೌಶಲ್ಯಕ್ಕೆ ಅನುಗುಣವಾಗಿ ಉದ್ಯೋಗವನ್ನು ಆಯ್ಕೆಮಾಡಿಕೊಳ್ಳಲು ಅವಕಾಶವಿರುತ್ತದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಉದ್ಯೋಗ ಮೇಳದಲ್ಲಿ ಭಾಗವಹಿಸಲು ಇಚ್ಛಿಸುವ ಉದ್ಯೋಗಾಕಾಂಕ್ಷಿಗಳು(Job Seekers) ಜಾಲತಾಣ:  www.raichurudyogmela.com ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ನೋಂದಾಯಿಸಿಕೊಳ್ಳಬಹುದಾಗಿದೆ. ಅಥವಾ ಕ್ಯೂ ಆರ್ ಕೋಡ್ ಸ್ಕ್ಯಾನ್ ಮೂಲಕ ಉಚಿತವಾಗಿ ನೋಂದಾಯಿಸಿಕೊಳ್ಳಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಧನಂಜಯ ಮೂರ್ತಿ ಮೊಬೈಲ್ ಸಂಖ್ಯೆ: 9538753304, ಮಂಜುನಾಥ ಮೊಬೈಲ್ ಸಂಖ್ಯೆ: 7975618955, ಮಹಾದೇವ ಮೊಬೈಲ್ ಸಂಖ್ಯೆ: 7676999304 ಹಾಗೂ ಪ್ರಕಾಶ ಮೊಬೈಲ್ ಸಂಖ್ಯೆ: 9845339241ಗೆ ಸಂಪರ್ಕ ಮಾಡಬಹುದಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular